Select Your Language

Notifications

webdunia
webdunia
webdunia
webdunia

ಚುನಾವಣೆ ವರ್ಷವಾಗಿದೆ, ಸಮಾವೇಶ ಆಯೋಜಿಸಿ: ಕೆ.ಸಿ.ವೇಣುಗೋಪಾಲ್

ಚುನಾವಣೆ ವರ್ಷವಾಗಿದೆ, ಸಮಾವೇಶ ಆಯೋಜಿಸಿ: ಕೆ.ಸಿ.ವೇಣುಗೋಪಾಲ್
ಬೆಂಗಳೂರು , ಬುಧವಾರ, 30 ಆಗಸ್ಟ್ 2017 (19:57 IST)
ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆಗಳು ನಡೆಯಲಿರುವುದರಿಂದ ಚುನಾವಣೆ ವರ್ಷವಾಗಿದೆ. ಹೆಚ್ಚು ಹೆಚ್ಚು ಸಮಾವೇಶಗಳನ್ನು ಆಯೋಜಿಸಿ ಎಂದು ಕೆಪಿಸಿಸಿ ಹಿಂದುಳಿದ ವರ್ಗದ ಮುಖಂಡರಿಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಖಡಕ್ ಸೂಚನೆ ನೀಡಿದ್ದಾರೆ.
ಕೆಪಿಸಿಸಿ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಕಾರ್ಯಕ್ರಮಗಳ ಬಗ್ಗೆ ಪಟ್ಟಿ ಸಿದ್ದಪಡಿಸಿ. ಕಾರ್ಯಕ್ರಮಗಳ ಪಟ್ಟಿಯನ್ನು ನಮಗೆ ನೀಡಿ ಎಂದು ಸಲಹೆ ನೀಡಿದರು.
 
ರಾಜ್ಯ ಸರಕಾರ ಜನಪರವಾದಂತಹ ಕೆಲಸ ಮಾಡುತ್ತಿದೆ. ಸರಕಾರದ ಸಾಧನೆಗಳನ್ನು ಕಾರ್ಯಕರ್ತರು ರಾಜ್ಯದ ಜನತೆಗೆ ಮನವರಿಕೆ ಮಾಡಿಕೊಡಬೇಕು. ಮನೆ ಮನೆಗೆ ತೆರಳಿ ಸರಕಾರದ ಸಾಧನೆಯನ್ನು ತಿಳಿಸಿ ಎಂದರು.
 
ಡಿಸೆಂಬರ್‌ನಲ್ಲಿ ಹಿಂದುಳಿದ ವರ್ಗಗಳ ಮಹಾಸಮಾವೇಶವನ್ನು ಆಯೋಜಿಸಿ. ಸಮಾವೇಶಕ್ಕೆ ಎಐಸಿಸಿ ಉಪಾಧ್ಯಕ್ಷರಾದ ರಾಹುಲ್ ಗಾಂಧಿ ಆಗಮಿಸುತ್ತಾರೆ ಎಂದು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಡೆಂಗ್ಯೂನಿಂದ ಗುಣಮುಖರಾದ ಪ್ರಿಯಾಂಕಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್