Publish Date: Thu, 18 May 2017 (13:29 IST)
Updated Date: Thu, 18 May 2017 (13:31 IST)
ಮುಂಬರುವ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚಾರ ಮಾಡಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ತಾಕತ್ತಿದ್ರೆ ಸಿಎಂ ಅಭ್ಯರ್ಥಿಯನ್ನುಘೋಷಿಸಲಿ ಎಂದು ಈಶ್ವರಪ್ಪ ಹಾಕಿದ ಸವಾಲಿಗೆ ಉತ್ತರಿಸಿದ ಅವರು, ಈಶ್ವರಪ್ಪ ಅವರ ಸವಾಲುಗಳಿಗೆ ಉತ್ತರಿಸಲು ಸಾಧ್ಯವಿಲ್ಲ. ಚುನಾವಣೆಗೆ ಮೊದಲೇ ಸಿಎಂ ಅಭ್ಯರ್ಥಿಯನ್ನು ಘೋಷಿಸುವುದು ನಮ್ಮ ಸಂಪ್ರದಾಯವಲ್ಲ ಎಂದು ತಿರುಗೇಟು ನೀಡಿದರು.
ಬಿಜೆಪಿಯಲ್ಲಿ ಸುಳ್ಳುಹೇಳುವ ತರಬೇತಿ ನೀಡಲಾಗುತ್ತದೆ. ಸುಳ್ಳು ಹೇಳುವುದೇ ಬಿಜೆಪಿ ನಾಯಕರ ಕಾಯಕವಾಗಿದೆ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ. ಪಕ್ಷದಲ್ಲಿ ಪ್ರತಿಯೊಬ್ಬ ನಾಯಕನು ಅರ್ಹತೆ ಹೊಂದಿದ್ದಾನೆ. ಚುನಾವಣೆಯಲ್ಲಿ ಜಯಗಳಿಸಿದ ನಂತರ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.