Select Your Language

Notifications

webdunia
webdunia
webdunia
webdunia

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಅಂತಿಮ ಮತದಾರರ ಪಟ್ಟಿ ಪ್ರಕಟ
bangalore , ಗುರುವಾರ, 5 ಜನವರಿ 2023 (19:43 IST)
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ: 05.01.2023 ರಂದು ಪ್ರಕಟಿಸಲಾಗಿದ್ದು, ಅದರಂತೆ 28 ವಿಧಾನಸಭಾ ಕ್ಷೇತ್ರಗಳ ಪೈಕಿ 3 ವಿಧಾನಸಭಾ ಕ್ಷೇತ್ರ(ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರ)ಗಳನ್ನು ಹೊರತುಪಡಿಸಿ ಉಳಿದ 25 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 8148989 ಮತದಾರರಿದ್ದಾರೆ. ಅದರಲ್ಲಿ 4226701 ಪುರುಷರು, 3920793 ಮಹಿಳೆಯರು ಹಾಗೂ 1495 ಇತರೆ(ತೃತೀಯ ಲಿಂಗಿಗಳು) ಮತದಾರರಿದ್ದಾರೆ ಎಂದು ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು.
 
ಅಂತಿಮ ಮತದಾರರ ಪಟ್ಟಿಯನ್ನು ಸಿಇಒ ವೆಬ್‌ಸೈಟ್ http://www.ceokarnataka.kar.nic.in ಮತ್ತು ಬಿಬಿಎಂಪಿ ವೆಬ್‌ಸೈಟ್ www.bbmp.gov.in ನಲ್ಲಿ ಪ್ರಚುರ ಪಡಿಸಲಾಗುವುದು. ಮತದಾರರು ತಮ್ಮ ಮತದಾರರ ಮಾಹಿತಿಯನ್ನು ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 
 
ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆಯಲ್ಲಿ, ಸೇರ್ಪಡೆ ತಿದ್ದುಪಡಿ, ಸ್ಥಳಾಂತರ ಹಾಗೂ ಮತದಾರರ ಪಟ್ಟಿಯಿಂದ ತೆಗೆದುಹಾಕುವಿಕೆ ಪ್ರಕ್ರಿಯೆ ಜಾರಿಯಲ್ಲಿರುತ್ತದೆ. ಈ ಪೈಕಿ ಮೊಬೈಲ್ ತಂತ್ರಾಂಶವಾದ Voter Helpline App, NVSP Portal(www.nvsp.in), 1950 ವೋಟರ್ ಹೆಲ್ಪ್ ಲೈನ್, ವೋಟರ್ ಪೋರ್ಟಲ್(www.voterportal.eci.gov.in) ಮುಖೇನ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಸಾರ್ವಜನಿಕರು/ಮತದಾರರು ಸದುಪಯೋಗಪಡಿಸಿಕೊಳ್ಳಲು ಕೋರಿದೆ.
 
ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಉಜ್ವಲ್ ಕುಮಾರ್ ಗೋಷ್, ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳಾದ, ದಯಾನಂದ್, ಡಾ. ಹರೀಶ್ ಕುಮಾರ್, ಜಗದೀಶ್ ನಾಯ್ಕ್, ವೆಂಕಟಾ ಚಲಪತಿ, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ಉಮೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಆನೇಕಲ್ ನಲ್ಲಿ ಕಾಡಾನೆ ಹಿಂಡು ಪ್ರತ್ಯಕ್ಷ್ಯ