Publish Date: Mon, 16 Oct 2023 (16:46 IST)
Updated Date: Mon, 16 Oct 2023 (19:17 IST)
ವಿದ್ಯುತ್ ಕ್ಷಾಮ ಆವರಿಸಿರುವ ಹಿನ್ನೆಲೆಯಲ್ಲಿ ನವೆಂಬರ್‌ನಿಂದ ಕಬ್ಬು ಅರೆಯುವ ಕಾರ್ಯ ಆರಂಭಿಸುವ ರಾಜ್ಯದ 65 ಸಕ್ಕರೆ ಕಾರ್ಖಾನೆಗಳು ಉತ್ಪಾದಿಸುವ ವಿದ್ಯುತ್ ಅನ್ನು ಹೊರಗಿನವರಿಗೆ ಮಾರಾಟ ಮಾಡದೆ ಸರ್ಕಾರಕ್ಕೆ ನೀಡುವಂತೆ ಆದೇಶ ಹೊರಡಿಸಲಾಗಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು. ಮಳೆ ಇಲ್ಲದೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚುತ್ತಿದೆ. ಹಾಗಾಗಿ ಸಕ್ಕರೆ ಕಾರ್ಖಾನೆಗಳು ಹೊರಗಡೆ ವಿದ್ಯುತ್ ಮಾರಾಟ ಮಾಡದೆ ಸರ್ಕಾರಕ್ಕೆ ಮಾರಾಟ ಮಾಡಬೇಕೆಂಬ ಆದೇಶ ಹೊರಡಿಸಿದೆ ಎಂದಿದ್ದಾರೆ.