Webdunia - Bharat's app for daily news and videos

Install App

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಬಂದ್

Webdunia
ಭಾನುವಾರ, 1 ಜನವರಿ 2023 (09:19 IST)
ಬೆಂಗಳೂರು : ಹೊಸ ವರ್ಷಾಚರಣೆಯ ಕ್ಷಣಗಣನೆ ಹಿನ್ನೆಲೆ. ಮುಂಜಾಗ್ರತಾ ಕ್ರಮವಾಗಿ ನಗರದ ಎಲ್ಲಾ ಫ್ಲೈಓವರ್ಗಳನ್ನು ಪೊಲೀಸ್ ಇಲಾಖೆ ಬಂದ್ ಮಾಡಿದೆ.

ಈ ನಡುವೆ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್ ಬಂದ್ ಮಾಡಿದ ಕಾರಣ ಪೊಲೀಸರು ಮತ್ತು ವಾಹನ ಸವಾರರ ನಡುವೆ ವಾಗ್ವಾದ ನಡೆದಿದೆ.

ಈಗಾಗಲೇ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಎಲ್ಲಾ ಫ್ಲೈಓವರ್ಗಳನ್ನು ಬಂದ್ ಮಾಡಿದ್ದಾರೆ. ಅದೇ ರೀತಿ ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ಬೋರ್ಡ್ ವರೆಗಿನ 9 ಕಿಲೋಮೀಟರ್ ದೂರದ ಫ್ಲೈಓವರ್ ಕೂಡ ಬಂದ್ ಮಾಡಲಾಗಿದೆ.

ಕುಡಿದು ಮೋಜು ಮಸ್ತಿ ಹಿನ್ನೆಲೆ. ರಾತ್ರಿ ವೇಳೆ ಕುಡಿದು ಅತಿವೇಗವಾಗಿ ವಾಹನ ಚಾಲನೆಯಿಂದ ಅಪಘಾತಗಳು ಸಂಭವಿಸುವ ಸಾಧ್ಯತೆಯಿಂದಾಗಿ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿತ್ತು.

ಆದರೆ ಇದೀಗ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಕ್ಲೋಸ್ ಮಾಡಿದ್ದಕ್ಕೆ ವಾಹನ ಸವಾರರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಯಾವುದೇ ಮಾಹಿತಿ ನೀಡದೆ ಕ್ಲೋಸ್ ಮಾಡಿದ್ದೀರಿ ಎಂದು ಟ್ರಾಫಿಕ್ ಪೊಲೀಸರೊಂದಿಗೆ ಜಟಾಪಟಿ ನಡೆಸಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಹತ್ತುವಾಗ ಬಿದ್ದುಹೋಗುವಂತಿದ್ದ ವೃದ್ಧರನ್ನು ದೇವರ ಹಾಗೇ ಕಾಪಾಡಿದ ಕ್ಲೀನರ್‌, Video

ಬಿಜೆಪಿ ಬಳ್ಳಾರಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ಛಲವಾದಿ ನಾರಾಯಣಸ್ವಾಮಿ

ಮುಂದಿನ ಚುನಾವಣೆಗೆ ನಾಗೇಂದ್ರ ನನ್ನ ವಿರುದ್ಧ ಸ್ಪರ್ಧಿಸಲಿ: ಶ್ರೀರಾಮುಲು ಸವಾಲು

ಆರ್‌ಎಸ್‌ಎಸ್‌ ವಿರುದ್ಧ ಅವಹೇಳನ, ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಬಿಗ್‌ ರಿಲೀಫ್‌

ನೇಪಾಳದ ಜಲಪ್ರಳಯದಲ್ಲಿ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 2,400ಕ್ಕೂ ಹೆಚ್ಚು ಮಂದಿ ಕಣ್ಮರೆ

ಮುಂದಿನ ಸುದ್ದಿ
Show comments