Publish Date: Fri, 13 Jul 2018 (13:06 IST)
Updated Date: Fri, 13 Jul 2018 (13:15 IST)
ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆ ದಾಳಿ ತೋಟದ ಕಾವಲುಗಾರನಿಗೆ ಗಂಭೀರ ಗಾಯಗಳಾಗಿವೆ.
ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಮಠ ಪರಂಬ ಕಾಫಿ ತೋಟದಲ್ಲಿ ಘಟನೆ ನಡೆದಿದೆ.
ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ರಾಮಯ್ಯ (52) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸಂಕೇತ್ ಪೂವಯ್ಯ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗೆ ವೈಯಕ್ತಿಕ ಹತ್ತು ಸಾವಿರ ತುರ್ತು ಪರಿಹಾರ ವಿತರಣೆ ಮಾಡಿದ್ದಾರೆ.
ಕಾಡಾನೆ ಹಾವಳಿ ತಡೆಗಟ್ಟುವಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಫಲ ಆಗಿದ್ದಾರೆ ಎಂದು ಸಂಕೇತ್ ಪೂವಯ್ಯ ಆರೋಪ ಮಾಡಿದ್ದಾರೆ. ಶಾಶ್ವತವಾಗಿ ಕಾಡಾನೆ ಹಾವಳಿ ಸಮಸ್ಯೆಯನ್ನು ತಡೆಗಟ್ಟಬೇಕೆಂದು ಕಾರ್ಮಿಕರ ಒತ್ತಾಯ ಮಾಡಿದ್ದಾರೆ.