Select Your Language

Notifications

webdunia
webdunia
webdunia
webdunia

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸಂಬಂಧಿಸಿದೆ ಮುಖ್ಯ ಆಯುಕ್ತರು ರವರಿಂದ ತುರ್ತು ಸಭೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸಂಬಂಧಿಸಿದೆ ಮುಖ್ಯ ಆಯುಕ್ತರು ರವರಿಂದ ತುರ್ತು ಸಭೆ
bangalore , ಶನಿವಾರ, 27 ನವೆಂಬರ್ 2021 (21:15 IST)
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಹಾಗೂ ಹೊಸ ಮಾದರಿಯ ಸೋಂಕು ಪ್ರಕರಣಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪ್ರಮುಖ‌ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಕೋವಿಡ್ ತಂಡಗಳನ್ನು‌ ನಿಯೋಜಿಸಿ ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಕಡ್ಡಾಯ ಪರೀಕ್ಷೆ ಮಾಡಬೇಕು ಎಂದು ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ನಗರದಲ್ಲಿ ಕೋವಿಡ್ ಸೋಂಕು ಸಂಬಂಧಿಸಿದಂತೆ ವರ್ಚುವಲ್ ಮೂಲಕ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ನಗರದ ಹೊರ ವಲಯ ಗಡಿ ಭಾಗದಲ್ಲಿ ಕೋವಿಡ್ ಪರೀಕ್ಷೆ ಮಾಡುವ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೊತೆ ಚರ್ಚಿಸಲಾಗಿದ್ದು, ಕೋವಿಡ್ ಹಾಗೂ ಹೊಸ ಮಾದರಿಯ ಸೋಂಕು ಪ್ರಕರಣಗಳು ಹರಡದಂತೆ ಮುನ್ನಚ್ಚರಿಕಾ ಕ್ರಮಗಳನ್ನು ವಹಸಿಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ನಗರದಲ್ಲಿ‌ ಕಳೆದ ವಾರದಿಂದ ಸರಾಸರಿ 160 ಕೋವಿಡ್ ಪ್ರಕರಣಗಳು ಕಂಡುಬರುತ್ತಿದ್ದು, 26 ರಂದು(ನಿನ್ನೆ) 224 ಕೋವಿಡ್ ಪ್ರಕರಣಗಳು ಕಂಡುಬಂದಿವೆ. ಈ ಪೈಕಿ ಆನೇಕಲ್ ವ್ಯಾಪ್ತಿಯಲ್ಲಿ‌ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ಆ ಭಾಗದಲ್ಲಿ ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ನಗರದ ಯಾವ ಭಾಗದಲ್ಲೂ ಕ್ಲಸ್ಟರ್ ಗಳು ವರದಿಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ 63 ಕಂಟೈನ್ಮೆಂಟ್ ಜೋನ್ ಗಳಿದ್ದು, ಅವುಗಳ ಮೇಲೆ ನಿಗಾವಹಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜಿನೋಮ್ ಸೀಕ್ವೆನ್ಸಿಂಗ್ ಮಾಡಿ ಬೇರೆ ಯಾವುದಾದರು ವೈರಾಣು ಪತ್ತೆಯಾಗಿದೆಯೆ ಎಂಬುದನ್ನು ಪರಿಶೀಲಿಸಿ ಎಂದು ತಿಳಿಸಿದರು.
 
ನಗರದಲ್ಲಿ ಇದುವರೆಗೆ ಒಟ್ಟು 1,38,06,027 ಡೋಸ್ ಲಸಿಕೆ ನೀಡಲಾಗಿದ್ದು, 80,69,986 ಮೊದಲ ಡೋಸ್(ಶೇ. 88 ರಷ್ಟು), 57,36,041 ಎರಡನೇ ಡೋಸ್(ಶೇ. 63 ರಷ್ಟು) ಲಸಿಕೆಯನ್ನು ನೀಡಲಾಗಿದೆ. ನಗರದಲ್ಲಿ ಲಸಿಕೆ ಪಡೆಯುವ ಸಂಬಂಧ ಆಟೋ ಗಳ ಮೂಲಕ ಧ್ವನಿವರ್ಧಗಳಲ್ಲಿ ಜಾಗೃತಿ ಮೂಡಿಸಬೇಕು. ಬ್ಲಾಕ್ ಮತ್ತು ಲೇನ್ ಮಟ್ಟದಲ್ಲಿ ಲಸಿಕೆ ನೀಡುವ ಪ್ರಕ್ರಿಯೆಯನ್ನು ಹೆಚ್ಚಿಸಬೇಕು ಎಂದರು.
 
ಸಭೆಯಲ್ಲಿ ವಿಶೇಷ ಆಯುಕ್ತರು (ಆರೋಗ್ಯ) ಡಾ. ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್, ಉಪ ಆರೋಗ್ಯಾಧಿಕಾರಿ ಡಾ. ಜಿ.ಕೆ.ಸುರೇಶ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಐಎಎಸ್ ಅಧಿಕಾರಿಯೊಬ್ಬರು ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿರುವ ಗಂಭೀರ ಆರೋಪ