Publish Date: Mon, 16 Oct 2023 (15:46 IST)
Updated Date: Mon, 16 Oct 2023 (18:53 IST)
ಬರಗಾಲವಿದ್ದರೂ ನಮ್ಮ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದಂತೆ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಆಚರಿಸಲಾಗುವುದು. ನಮ್ಮ ಪರಂಪರೆ ಮತ್ತು ಹಿರಿಮೆಯನ್ನು ಜಗತ್ತಿಗೆ ಸಾರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಸರಾ ಮೂಲಕ ನಾಡಿನ ಕಲೆ, ಸಂಸ್ಕೃತಿಯನ್ನು ದೇಶಕ್ಕೆ ತಿಳಿಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿಯನ್ನು ಜನರಿಗೆ ತಿಳಿಸುವ ಕಾರ್ಯವನ್ನು ದಸರಾ ಮೆರವಣಿಗೆ ಮೂಲಕ ಮಾಡುತ್ತೇವೆ.ಇದು ಇಡೀ ಜಗತ್ತಿಗೆ ಕನ್ನಡ ನಾಡಿನ ವೈಭೋಗ ತಿಳಿಸುವ ಕಾರ್ಯ ದಸರಾ ಮೂಲಕ ಆಗುತ್ತಿದೆ ಎಂದರು.