Daily Horoscope

Select Your Language

Notifications

webdunia
webdunia
webdunia
webdunia

ಪ್ರವಾಸೋದ್ಯಮಕ್ಕೆ ಒತ್ತು – ಸಿಎಂ ಸಿದ್ದರಾಮಯ್ಯ

ಪ್ರವಾಸೋದ್ಯಮ
ಕರ್ನಾಟಕ ರಾಜ್ಯ ಬಜೆಟ್‌ 2024 ರಲ್ಲಿ ರಾಜ್ಯವನ್ನು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿ ರಾಜ್ಯವನ್ನಾಗಿಸುವುದಾಗಿ ಘೋಷಿಸಲಾಗಿದೆ.  ಇದರೊಂದಿಗೆ ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಜಾರಿಗೊಳಿಸುವುದಾಗಿಯೂ ಸಹ ಉಲ್ಲೇಖಿಸಲಾಗಿದೆ.
ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಜೆಟ್‌ ನಲ್ಲಿ ಸಿಕ್ಕಿರುವ ಕೊಡುಗೆಗಳು ಹೀಗಿವೆ.. 
•    ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಗೆ 100 ಕೋಟಿ ರೂ. 
• ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿ 
• ಸಾಹಸ ಪ್ರವಾಸೋದ್ಯವನ್ನು ಉತ್ತೇಜಿಸಲು ರಾಜ್ಯದ ಪ್ರಮುಖ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್‌ ಕಾರ್‌/ ರೋಪ್‌ ವೇ ಸೌಲಭ್ಯ ಅಭಿವೃದ್ಧಿ 
• ಗೋಕಾಕ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ  
• ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನು 3ಡಿ ಲೇಸರ್‌ ಸ್ಕ್ಯಾನಿಂಗ್‌ ಮೂಲಕ ಡಿಜಿಟಲ್ ದಾಖಲೀಕರಣ 
• ಡಿಜಿಟಲ್‌ ಮಾಹಿತಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲು ಕ್ರಮ  
• ರಾಷ್ಟ್ರಕೂಟರ ಕಾಲದಲ್ಲಿ ಕರ್ನಾಟಕದ ಮೊಟ್ಟ ಮೊದಲ ವಿಶ್ವವಿದ್ಯಾಲಯವನ್ನು ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲ್ಲೂಕಿನ ನಾಗಾವಿಯಲ್ಲಿ ಸ್ಥಾಪಿಸಲಾಗಿತ್ತು ಎಂಬುದು ಸ್ಥಳೀಯರ ನಂಬಿಕೆ. ಅಲ್ಲಿನ ಪ್ರಾಚ್ಯಾವೇಶಗಳ ಸಂಶೋಧನೆ ಮತ್ತು ಸಂರಕ್ಷಣೆಗಾಗಿ ನೆರವು ನೀಡಲು Archaeological Survey of India (ASI) ಗೆ ಶಿಫಾರಸ್ಸು.
• ಕೆ.ಎಸ್.‌ಟಿ.ಡಿ.ಸಿ ವತಿಯಿಂದ ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್‌ ನಿರ್ಮಾಣ ಹಾಗೂ ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್‌ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿ.
• ಬೀದರ್‌ ಹಾಗೂ ವಿಜಯಪುರದಲ್ಲಿ ಕರೇಜ್‌ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯನ್ನು ನುರಿತ ಸಂಸ್ಥೆಗಳ ತಾಂತ್ರಿಕ ನೆರವಿನೊಂದಿಗೆ 15 ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನ
• ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್‌ ಸೆಂಟರ್‌ಗಳನ್ನು ಜೆ.ಎಲ್.ಆರ್‌ ಸಂಸ್ಥೆಯ ಮೂಲಕ ನಿರ್ಮಾಣ 
• ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ  
• ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮನ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸಂರಕ್ಷಿಸಿ ಅಭಿವೃದ್ಧಿಗೊಳಿಸಲು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯನ್ನು ರಚನೆ 

Share this Story:

Follow Webdunia kannada

ಮುಂದಿನ ಸುದ್ದಿ

ಕಾಶಿ, ತಿರುಪತಿಗೆ ಹೋಗುವ ಕನ್ನಡಿಗರಿಗೆ ಗುಡ್‌ ನ್ಯೂಸ್‌