Select Your Language

Notifications

webdunia
webdunia
webdunia
webdunia

ಉದ್ಯೋಗ ಮೇಳದಲ್ಲಿ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ನೀಡಲಾಗುವುದು: ಸಚಿವ ಕೆ.ಗೋಪಾಲಯ್ಯ

ಉದ್ಯೋಗ ಮೇಳದಲ್ಲಿ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ನೀಡಲಾಗುವುದು: ಸಚಿವ ಕೆ.ಗೋಪಾಲಯ್ಯ
bangalore , ಭಾನುವಾರ, 5 ಫೆಬ್ರವರಿ 2023 (21:41 IST)
ಬೆಂಗಳೂರಿನಲ್ಲಿ ಇಂದು 5 ರಿಂದ 6 ಕಡೆ ಉದ್ಯೋಗ ಮೇಳ ನಡೆಯುತ್ತದೆ. ಅದರಲ್ಲಿ ಮಹಾಲಕ್ಷ್ಮಿ ಲೇಔಟ್ ನಲ್ಲಿ ಸಹ ಒಂದು. ಇಂದಿನ ಉದ್ಯೋಗ ಮೇಳದಲ್ಲಿ 100 ಕಿಂತ ಹೆಚ್ಚು ಕಂಪನಿಗಳು ಆಗಮಿಸಿದ್ದು, ಉದ್ಯೋಗ ಮೇಳದಲ್ಲಿ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ನೀಡಲಾಗುವುದು ಎಂದು ಸ್ಥಳೀಯ ಶಾಸಕರು ಮತ್ತು ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.
 
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಭೋವಿಪಾಳ್ಯದ ಬಿಜಿಎಸ್ ಕಾಲೇಜು ಕ್ಯಾಂಪಸ್ ನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಶ್ರೀ ಮಹಾಲಕ್ಷ್ಮಿ ಎಜುಕೇಶನಲ್ ಟ್ರಸ್ಟ್ ವತಿಯಿಂದ  ನಡೆದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
 
ಕ್ಷೇತ್ರದ ವಿದ್ಯಾರ್ಥಿಗಳಿಗೆ ಪ್ರಾಮಾಣಿಕವಾಗಿ ಉದ್ಯೋಗಗಳನ್ನು ನೀಡುವ ನಿಟ್ಟಿನಲ್ಲಿ ಕೆಲಸ ಮಾಡೋಣ. ಉದ್ಯೋಗ ಮೇಳದಲ್ಲಿ ಆಯ್ಕೆಯಾಗದಿರುವವರು ನಿರಾಶೆ ಮಾಡಿಕೊಳ್ಳಬೇಡಿ ನಿಮ್ಮ ಶ್ರಮಕ್ಕೆ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶ ದೊರೆಯುತ್ತದೆ ಎಂದು ಹೇಳಿದರು.
 
ಉದ್ಯೋಗ ಮೇಳದಲ್ಲಿ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕೌಶಲ್ಯಾಭಿವೃದ್ಧಿ ಇಲಾಖೆಯು ಆಯ್ಕೆಮಾಡಿಕೊಂಡು ಅವರಿಗೆ ಉದ್ಯೋಗವನ್ನು ನೀಡುವ ಕೆಲಸ ಮಾಡುತ್ತದೆ ಎಂದರು.
 
ಇದೇ ವೇಳೆ ಉದ್ಯೋಗ ಮೇಳವನ್ನು ಉದ್ದೇಶಿಸಿ ಸಂಸದರಾದ ಡಿ.ವಿ ಸದಾನಂದಗೌಡ ಅವರು ಮಾತನಾಡಿ ಇಂದಿನ ಹೊಸ ಶಿಕ್ಷಣ ನೀತಿಯಲ್ಲಿ ಎಂಟನೇ ತರಗತಿಯಿಂದ ಕೌಶಲ್ಯಕ್ಕೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಮನಸ್ಸಿನ ಭಾವನೆಗಳನ್ನು ಸಕ್ರಿಯವಾಗಿ ಪರಿವರ್ತಿನೆ ಮಾಡುವ ಕಾಯಕವೇ ಕೌಶಲ್ಯ ಎಂದು ಹೇಳಿದರು.
 
ನಮ್ಮ ದೇಶದಲ್ಲಿ ಯುವಜನತೆಯ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಿಗೆ ಉದ್ಯೋಗ ಕೊಡಲೆಂದು ಉದ್ಯೋಗ ಮೇಳಗಳು ನಡೆಯುತ್ತವೆ. ಇದರ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಉದ್ಯೋಗಗಳನ್ನು ಪಡೆಯಿರಿ ಎಂದರು.
 
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿಯ ಶ್ರೀ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿಯವರು, ಮಾಜಿ ಉಪಮೇಯರ್ ಎಸ್. ಹರೀಶ್, ಬಿಜೆಪಿ ಮುಖಂಡರುಗಳಾದ ಜಯರಾಮ್, ರಾಜೇಂದ್ರ ಕುಮಾರ್, ರಾಘವೇಂದ್ರ ಶೆಟ್ಟಿ, ವೆಂಕಟೇಶ್ ಮೂರ್ತಿ, ಪದ್ಮಾವತಿ ಶ್ರೀನಿವಾಸ್, ನಾಗರತ್ನ ಲೋಕೇಶ್ ಸೇರಿದಂತೆ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಿವೆಂಟಿವ್‌ ಆಂಕೊಲಾಜಿ ವಿಭಾಗ" ಉದ್ಘಾಟಿಸಿದ ನಟಿ ಪೂಜಾಗಾಂಧಿ