ಒಬ್ಬನ ಜತೆ ಎಂಗೇಜ್‌ಮೆಂಟ್, ಮತ್ತೊಬ್ಬನೊಂದಿಗೆ ವಿವಾಹ...!

Webdunia
ಭಾನುವಾರ, 19 ನವೆಂಬರ್ 2017 (14:15 IST)
ಯುವತಿಯೊಬ್ಬಳು ಒಬ್ಬನ ಜತೆ ಎಂಗೇಜ್‌ಮೆಂಟ್ ಮಾಡಿಕೊಂಡು ಮತ್ತೊಬ್ಬನ ಜೊತೆ ವಿವಾಹ ಮಾಡಿಕೊಂಡ ವಿಚಿತ್ರ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿಯಲ್ಲಿ ನಡೆದಿದೆ.
 
ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿದ್ದ ಯುವಕನೊಂದಿಗೆ ಯುವತಿಗೆ ಎಂಗೇಜ್‌ಮೆಂಟ್ ಆಗಿತ್ತು. ವಿವಾಹ ದಿನಾಂಕವೂ ನಿಗದಿಯಾಗಿತ್ತು. ಆದರೆ, ಯುವತಿ ನಾಪತ್ತೆಯಾಗಿದ್ದಳು, ನಂತರ ಬೇರೆ ಯುವಕನೊಂದಿಗೆ ವಿವಾಹವಾದ ಫೋಟೋಗಳನ್ನು ಎಂಗೇಜ್‌ಮೆಂಟ್ ಮಾಡಿಕೊಂಡ ಭಾವಿ ವರನಿಗೆ ರವಾನಿಸಿದ್ದಾಳೆ
 
ಮಧ್ಯಪ್ರದೇಶದ ಇಂದೋರ್ ಮೂಲದ ಯುವಕನೊಂದಿಗೆ ಯುವತಿ ಸೆಪ್ಟೆಂಬರ್ 11 ರಂದೇ ಸಪ್ತಪದಿ ತುಳಿದಿದ್ದಾಳೆ. ಆದರೆ ಮಾಹಿತಿ ಗೌಪ್ಯವಾಗಿಟ್ಟಿದ್ದಳು. ಮನೆಯವರ ಒತ್ತಾಯದ ಮೇರೆಗೆ ಇಂಜಿನಿಯರ್‌ನೊಂದಿಗೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಳು ಎನ್ನಲಾಗಿದೆ.
 
ಯುವತಿಯ ಕಿತಾಪತಿಯಿಂದ ಇಂದು ಬೆಂಗಳೂರು ಮೂಲದ ಇಂಜಿನಿಯರ್‌ನೊಂದಿಗೆ ನಡೆಯಬೇಕಾಗಿದ್ದ ವಿವಾಹ ರದ್ದಾಗಿದೆ. ಎರಡು ಕುಟುಂಬಗಳು ಶಾಕ್‌ಗೊಳಗಾಗಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments