Daily Horoscope

ಐಷಾರಾಮಿ ಬೈಕ್ ಕಳ್ಳತನ ಮಾಡುತ್ತಿದ್ದ ಎಂಜಿನೀರ್ ಅಂಡ್ ಗ್ಯಾಂಗ್ ಅರೆಸ್ಟ್

Webdunia
ಮಂಗಳವಾರ, 5 ಏಪ್ರಿಲ್ 2022 (17:57 IST)
ಬೆಂಗಳೂರಿನಲ್ಲಿ ಐಷರಾಮಿ ಬೈಕ್​ಗಳನ್ನು ಕದಿಯುತ್ತಿದ್ದ ಆರೋಪಿಗಳನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಉತ್ತರಹಳ್ಳಿ ನಿವಾಸಿಯಾಗಿರುವ ವಿಜಯ್, ಹೇಮಂತ್, ಗುಣಶೇಖರ್, ಪುರುಷೋತ್ತಮ್, ಭಾನು, ಕಿರಣ, ಕಾರ್ತಿಕ್ ಬಂಧಿತ ಆರೋಪಿಗಳಾಗಿದ್ದು, ಮೆಕ್ಯಾನಿಕಲ್ ಇಂಜಿನಿಯರ್ ಓದಿರುವ ವಿಜಯ್ ತನ್ನ ಸಹಚರರೊಂದಿಗೆ ಸೇರಿಕೊಂಡು ರಾಯಲ್​ ಎನ್​ಫೀಲ್ಡ್​​ ಬೈಕ್​ಗಳನ್ನೇ ಟಾರ್ಗೆಟ್​​ ಮಾಡುತ್ತಿದ್ದ.
ರಾತ್ರಿ 12ಗಂಟೆ ಬಳಿಕ ಬೈಕ್ ಇರುವ ಜಾಗಕ್ಕೆ ಹೋಗಿ ಲಾಕ್​ ಮುರಿದು ಕಳ್ಳತನ ಮಾಡುತ್ತಿದ್ದರು. ಬಳಿಕ ವಿಜಯ್​ ಮನೆಗೆ ತಂದು ಹೊಸ ಲಾಕ್​ ಜೋಡಿಸಿ ಆಂಧ್ರಪ್ರದೇಶಕ್ಕೆ ರೈಡ್​ ಹೋಗಿ ಅಲ್ಲಿ 30ರಿಂದ 40 ಸಾವಿರಕ್ಕೆ ಈ ಕದ್ದ ಬೈಕ್​ಗಳನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಬೈಕ್​ ಕಳ್ಳತನವಾದ ಬಗ್ಗೆ ಬನಶಂಕರಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿಟಿವಿ ದೃಶ್ಯ ಆಧರಿಸಿ ತನಿಖೆಗಿಳಿದ ಪೊಲೀಸರು ಆಂಧ್ರಪ್ರದೇಶ ಹಾಗೂ ಬೆಂಗಳೂರಿನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ಮೌಲ್ಯದ 27 ರಾಯಲ್​ ಎನ್​ಫೀಲ್ಡ್ , 3 ಪಲ್ಸರ್ ಹಾಗೂ ಆಕ್ಟೀವಾ ಬೈಕ್​ ಸೇರಿದಂತೆ ಒಟ್ಟು 31 ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments