Select Your Language

Notifications

webdunia
webdunia
webdunia
webdunia

ಇಂಜಿನಿಯರಿಂಗ್ ವಿದ್ಯಾರ್ಥಿ ಅನುಮಾನಸ್ಪದ ಸಾವು...?

Engineering
ಕಲಬುರ್ಗಿ , ಗುರುವಾರ, 21 ಸೆಪ್ಟಂಬರ್ 2017 (18:21 IST)
ಕಲಬುರ್ಗಿ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ.

ಬೀದರ್ ನಿವಾಸಿ ಉದಯ್(22) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಟೋಮೊಬೈಲ್ 4ನೇ ಸೆಮಿಸ್ಟರ್ ವ್ಯಾಸಾಂಗ ಮಾಡುತ್ತಿದ್ದ ಉದಯ್, ಫೇಲಾಗಿದ್ದರಿಂದ ಮರುಮೌಲ್ಯಮಾಪನಕ್ಕೆ ಹಾಕಿದ್ದ. ಆದರೆ ಮರುಮೌಲ್ಯಮಾಪನದಲ್ಲಿಯೂ ಸಹ ಫೇಲಾಗಿದ್ದ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಆದರೆ ವಿದ್ಯಾರ್ಥಿಯು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ, ಈ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ತನಿಖೆ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬುರ್ಖಾ ತೊಟ್ಟು ಡಾನ್ಸ್ ಮಾಡಿದ ಯುವತಿ: ಮುಸ್ಲಿಂ ಮೌಲ್ವಿಗಳ ಆಕ್ರೋಶ