Select Your Language

Notifications

webdunia
webdunia
webdunia
webdunia

ಇಂಜಿನಿಯರಿಂಗ್ ವಿದ್ಯಾರ್ಥಿನಿಯದ್ದು ರೇಪ್ ಅಂಡ್ ಮರ್ಡರ್?

ಇಂಜಿನಿಯರಿಂಗ್ ವಿದ್ಯಾರ್ಥಿನಿಯದ್ದು ರೇಪ್ ಅಂಡ್ ಮರ್ಡರ್?
ರಾಯಚೂರು , ಶುಕ್ರವಾರ, 19 ಏಪ್ರಿಲ್ 2019 (14:16 IST)
ಹಲವು ಅನುಮಾನಗಳಿಗೆ ಎಡೆ ಮಾಡಿದ್ದ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಸಾವಿನ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ.

ರಾಯಚೂರಿನಲ್ಲಿ ವಿದ್ಯಾರ್ಥಿನಿ ಮಧು ಪತ್ತಾರ್ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಬಂದಿದ್ದು, ಆತ್ಮಹತ್ಯೆ ಅಲ್ಲ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಎಫ್ ಐಆರ್ ದಾಖಲಿಸಲಾಗಿದೆ. ಹೆತ್ತವರ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಸುದರ್ಶನ ಯಾದವ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಪ್ರಾಥಮಿಕ ತನಿಖೆ ಕೈಗೊಂಡ ಪೊಲೀಸರು, ಕೆಲವೊಂದು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು ಅದರ ಆಧಾರದಡಿ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಆದರೆ, ಶವ ಪರೀಕ್ಷೆ ವರದಿ ಇನ್ನೂ ಬಂದಿಲ್ಲ ಎಂದು ನೇತಾಜಿ ಠಾಣೆ ಪಿಎಸ್ ಐ ತಿಳಿಸಿದ್ದಾರೆ.

ಇದು ಆತ್ಮಹತ್ಯೆಯಲ್ಲ ಕೊಲೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನವೋದಯ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಎರಡು ದಿನಗಳಿಂದ ಹೋರಾಟ ನಡೆಸಿದ್ದವು.



Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆ ಮುಗಿದರೂ ಇವ್ರು ತುಂಬಾ ಬ್ಯುಸಿ