ಕಾಂಗ್ರೆಸ್‌ನಿಂದ ದೇವೇಗೌಡರು ಪ್ರಧಾನಿಯಾಗಿದ್ದು, ಕುಮಾರಸ್ವಾಮಿ ಸಿಎಂ ಆಗಿದ್ದು: ಕೃಷ್ಣ ಭೈರೇಗೌಡ

Sampriya
ಮಂಗಳವಾರ, 23 ಏಪ್ರಿಲ್ 2024 (15:13 IST)
Photo Courtesy X
ಬೆಂಗಳೂರು : ಕಾಂಗ್ರೆಸ್ ಪಕ್ಷದ ಸಹಕಾರದಿಂದಲೇ ದೇವೇಗೌಡರು ಪ್ರಧಾನಿಯಾಗಿದ್ದು, ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ಹೊರತು ಬಿಜೆಪಿಯಿಂದ ಅಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಾಗ್ದಾಳಿ ನಡೆಸಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಎಂ.ವಿ.ರಾಜೀವ್ ಗೌಡ ಪರ  ಬ್ಯಾಟರಾಯನಪುರದಲ್ಲಿ ನಡೆದ ರೋಡ್ ಶೋನಲ್ಲಿ ಮಾತನಾಡಿದರು.

ಕೇಂದ್ರ ಸರ್ಕಾರವು ಆರು ಕೋಟಿ ಕನ್ನಡಿಗರಿಗೆ ಅನುದಾನ ಕಡಿತ ಮಾಡಿದ ವಿಚಾರ ಇರಬಹುದು ಅಥವಾ ಬರ ಪರಿಹಾರದಲ್ಲಿ ಆಗಿರುವ ಅನ್ಯಾಯದ ಬಗ್ಗೆ ತುಟಿ ಬಿಚ್ಚದವರು ಇದೀಗ ಪ್ರಧಾನಿಗಳ ಪಕ್ಕದಲ್ಲಿ ಕೂತು  ಏನೇನೋ ಮಾತನಾಡುತ್ತಿದ್ದಾರೆಂದು ದೇವೇಗೌಡರ ನಡೆ ಬಗ್ಗೆ ಅವರು ಗುಡುಗಿದರು.

10 ವರ್ಷಗಳಿಂದ ಕೇಂದ್ರ ಮೋದಿ ಸರ್ಕಾರ ಕರ್ನಾಟಕಕ್ಕೆ ಅತಿ ಕಡಿಮೆ ಅನುದಾನ ನೀಡಿ ಸತತ ವಂಚನೆ ಮಾಡಿದೆ. ಇದನ್ನು ಡಬಲ್ ಇಂಜಿನ್ ಸರ್ಕಾರ ಇದ್ದಾಗಲೂ ಯಾವ ಬಿಜೆಪಿ ನಾಯಕರು ಕೂಡ ಪ್ರಶ್ನಿಸಲಿಲ್ಲ. ಬೇರೆ ಬೇರೆ ರಾಜ್ಯಗಳಿಗೆ ಕಣ್ಣ ಮುಂದೆಯೇ ವಿಶೇಷ ಪ್ಯಾಕೇಜುಗಳು ಘೋಷಣೆಯಾದಾಗಲೂ ಕೂಡಾ ಕರ್ನಾಟಕದ ಬಿಜೆಪಿ ಸಂಸದರು ಬಾಯಿ ಮುಚ್ಚಿಕೊಂಡಿದ್ದನ್ನು ಕನ್ನಡಿಗರು ಇನ್ನೂ ಮರೆತಿಲ್ಲ ಎಂದರು.

ಕಾಂಗ್ರೆಸ್ ಸರ್ಕಾರ ಕನ್ನಡಿಗರ ಅನುದಾನದ ಪಾಲನ್ನು ಪಡೆಯಲು ಸುಪ್ರೀಂ ಕೋರ್ಟಿಗೆ ಹೋಗಿ ಹೋರಾಟ ಮಾಡಿ ಜಯ ಸಾಧಿಸಿದೆ ಎಂದು ಸಚಿವ ಕೃಷ್ಣ ಭೈರೆಗೌಡ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ಮುಂದಿನ ಸುದ್ದಿ
Show comments