ಬೆಂಗಳೂರು: ಬೆಂಗಳೂರು ಗ್ರಾಮಾಂತರದ ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಅಪಾರ್ಟ್‌ಮೆಂಟ್ ನಿವಾಸಿಗಳ ಬಳಿ ಮತಯಾಚನೆ ಮಾಡುವ ವೇಳೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.
ಚುನಾವಣಾ ಅಧಿಕಾರಿಗಳ ದೂರಿನ ಹಿನ್ನೆಲೆಯಲ್ಲಿ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನ್ಯಾ. ಕೃಷ್ಣ ದೀಕ್ಷಿತ್ ಅವರಿದ್ದ ಏಕ ಸದಸ್ಯ ಪೀಠದಲ್ಲಿ ನಡೆಯಿತು.
ವಿಚಾರಣೆ ನಡೆಸಿದ ಕೋರ್ಟ್ ಭಾಷಣದ ವೇಳೆ ಇದು ಪುನರಾವರ್ತನೆಯಾಗದಂತೆ ಕಕ್ಷಿದಾರರಿಗೆ ಎಚ್ಚರಿಸಿ ಎಂದು ಡಿಕೆಶಿ ಪರ ವಕೀಲ ಉದಯ್ ಹೊಳ್ಳಗೆ ಸೂಚಿಸಿ ಪ್ರಕರಣಕ್ಕೆ ತಡೆ ನೀಡಿದೆ.
ಎರಡು ಕಡೆಯ ವಾದ ಆಲಿಸಿ ಚುನಾವಣೆ ಪ್ರಚಾರದ ಗುಣಮಟ್ಟ ಕುಸಿತಕ್ಕೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.