Select Your Language

Notifications

webdunia
webdunia
webdunia
webdunia

ಕೆಎಎಸ್‌ ಪ್ರಶ್ನೆಪತ್ರಿಕೆಯಲ್ಲಿ ದೋಷ: ಎರಡು ತಿಂಗಳೊಳಗೆ ಮರುಪರೀಕ್ಷೆಗೆ ಸಿದ್ದರಾಮಯ್ಯ ಸೂಚನೆ

ಕೆಎಎಸ್‌ ಪ್ರಶ್ನೆಪತ್ರಿಕೆಯಲ್ಲಿ ದೋಷ: ಎರಡು ತಿಂಗಳೊಳಗೆ ಮರುಪರೀಕ್ಷೆಗೆ ಸಿದ್ದರಾಮಯ್ಯ ಸೂಚನೆ

Sampriya

ಬೆಂಗಳೂರು , ಸೋಮವಾರ, 2 ಸೆಪ್ಟಂಬರ್ 2024 (14:12 IST)
ಬೆಂಗಳೂರು: ಕೆಎಎಸ್‌ ಸೇರಿದಂತೆ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಮತ್ತೆ ಪೂರ್ವಭಾವಿ ಪರೀಕ್ಷೆ ನಡೆಸುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಕುರಿತ ಮಾಹಿತಿಯನ್ನು ಸಿದ್ದರಾಮಯ್ಯ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆಗಸ್ಟ್ 27ರಂದು ನಡೆದ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯ ಭಾಷಾಂತರದಲ್ಲಿ ಹೆಚ್ಚು ತಪ್ಪುಗಳಿದ್ದವು.  

ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ

ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಸ್ಕೃತ ಕಲಿಯದಿದ್ದರೆ ಸತ್ತ ಮೇಲೆ ಸ್ವರ್ಗಕ್ಕೆ ಟಿಕೆಟ್ ಸಿಗಲ್ಲ: ಪುತ್ತಿಗೆ ಶ್ರೀಗಳ ವಿವಾದಿತ ಹೇಳಿಕೆ