Webdunia - Bharat's app for daily news and videos

Install App

ರಾಯಣ್ಣ ಬ್ರಿಗೇಡ್ ಬೆನ್ನಲ್ಲೇ ಕ್ರಾಂತಿ ವೀರ ಬ್ರಿಗೇಡ್ ಘೋಷಿಸಿದ ಈಶ್ವರಪ್ಪ

Sampriya
ಗುರುವಾರ, 30 ಜನವರಿ 2025 (19:57 IST)
Photo Courtesy X
ಶಿವಮೊಗ್ಗ: ಈ ಹಿಂದೆ ರಾಯಣ್ಣ ಬ್ರಿಗೇಡ್ ಆರಂಭಿಸಿ ಬಿಜೆಪಿಗೆ ಸಡ್ಡು ಹೊಡೆದಿದ್ದ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಅವರು ಇದೀಗ ಕ್ರಾಂತಿ ವೀರ ಬ್ರಿಗೇಡ್ ಸಂಘಟನೆ ಘೋಷಿಸಿ ಮತ್ತೇ ಬಿಜೆಪಿಗೆ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಾತಿಗಳ ಮಠಾಧೀಶರುಗಳು ಕ್ರಾಂತಿವೀರ ಬ್ರಿಗೇಡ್ ಒಳಗೊಳ್ಳಲಿದ್ದಾರೆ.  ಹಿಂದೂಗಳ ಏಕೀಕರಣಕ್ಕಾಗಿ ಕೆಲಸ ಮಾಡಲಿದೆ. ಈ ಸಂಘಟನೆ ಫೆಬ್ರವರಿ 4 ರಂದು ಬಸವನ ಬಾಗೇವಾಡಿಯಲ್ಲಿ ಉದ್ಘಾಟನೆಯಾಗಲಿದೆ ಎಂದು ಈಶ್ವರಪ್ಪ ಅವರು ಗುರುವಾರ ತಿಳಿಸಿದ್ದಾರೆ.

ರಾಜ್ಯದಲ್ಲಿ ಹಿಂದುತ್ವವನ್ನು ಉಳಿಸಲು ಕೆಲಸ ಮಾಡುವ ಮಠಾಧೀಶರ ವೇದಿಕೆ ರಚನೆಗೆ ನೇತೃತ್ವ ವಹಿಸುವಂತೆ ಉತ್ತರ ಕರ್ನಾಟಕದ ಮಠಾಧೀಶರು ತಮ್ಮನ್ನು ಕೇಳಿಕೊಂಡಿದ್ದರು ಎಂದು ಈಶ್ವರಪ್ಪ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ವೇದಿಕೆಯನ್ನು ಕ್ರಾಂತಿವೀರ ಬ್ರಿಗೇಡ್‌ ಎಂದು ಹೆಸರಿಸಲಾಗಿದೆ. ನಾನು ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಪ್ರಯಾಣಿಸಿದೆ ಮತ್ತು ಹೆಚ್ಚು ಅಭಿವೃದ್ಧಿ ಹೊಂದಿಲ್ಲದ ಎಲ್ಲಾ ಜಾತಿಗಳ ಮಠಗಳಿಗೆ ಭೇಟಿ ನೀಡಿದ್ದೇನೆ ಎಂದು ಮಾಹಿತಿ ಹಂಚಿಕೊಂಡರು.

12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ಕ್ರಾಂತಿ ವೀರ ಬ್ರಿಗೇಡ್ ಉದ್ಘಾಟನೆಗೊಳ್ಳಲಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments