Publish Date: Thu, 04 May 2023 (19:15 IST)
Updated Date: Thu, 04 May 2023 (18:27 IST)
ಕಾಂಗ್ರೆಸ್ ಪ್ರಣಾಳಿಕೆ ಮೊಹ್ಮದ್ ಅಲಿ ಜಿನ್ನಾ ಪ್ರಣಾಳಿಕೆ ಆಗಿದೆ ಎಂದು ಮಾಜಿ ಸಚಿವ K.S. ಈಶ್ವರಪ್ಪ ಕಿಡಿಕಾರಿದ್ದಾರೆ.ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.. ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಹಾಕಿ ಆಕ್ರೋಶ ಹೊರಹಾಕಿದ್ರು... ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ.. ಕಾಂಗ್ರೆಸ್‌ನವರ ಮನಸ್ಥಿತಿ ರಾಜ್ಯದ ಜನರಿಗೆ ಗೊತ್ತಿದೆ.. ಜಾತಿ ಹೆಸರಲ್ಲಿ ಮತ ಕೇಳಲು ಕಾಂಗ್ರೆಸ್‌ಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದ್ರು.. ಬಜರಂಗದಳ ಬ್ಯಾನ್ ಮಾಡಿ ಮುಸ್ಲಿಮರ ತುಷ್ಟೀಕರಣ ಮಾಡಲು ಕಾಂಗ್ರೆಸ್ ಹೊರಟಿದೆ.. ಎಲ್ಲಾ ರಾಷ್ಟ್ರ ಭಕ್ತರು ಪ್ರಣಾಳಿಕೆಯನ್ನ ಬಹಿಷ್ಕರಿಸಬೇಕು ಎಂದು ಕರೆ ಕೊಟ್ರು.