ಅತೃಪ್ತ ನಾಯಕರ ಬಹಿರಂಗ ಸಭೆಯಲ್ಲಿ ಹಾಜರಾದ ಬಿಜೆಪಿ ನಾಯಕ ಈಶ್ವರಪ್ಪಗೆ ಮತ್ತೊಂದು ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿಧಾನ ಪರಿಷತ್ ವಿಪಕ್ಷ ಸ್ಥಾನದಿಂದ ಈಶ್ವರಪ್ಪರನ್ನ ಕೆಳಗಿಳಿಸುವ ಕುರಿತು ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಮಾಜಿ ಸಿಎಂ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಮಾತನಾಡಿದ ವೀರಯ್ಯ, ಕೆಲ ದಿನಗಳಲ್ಲಿ ಬಿಜೆಪಿ ಸದಸ್ಯರು ಸಭೆ ಸೇರಿ ಈಶ್ವರಪ್ಪ ನಡೆ ಬಗ್ಗೆ ಮಾತುಕತೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ಈ ಮಧ್ಯೆ ಇಂದು ದೆಹಲಿಗೆ ತೆರಳಲಿರುವ ಯಡಿಯೂರಪ್ಪ ರಾಷ್ಟ್ರೀಯ ಮುಕಂಡರ ಜೊತೆ ಮಾತುಕತೆ ನಡೆಸಲಿದ್ದಾರೆ. ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಮುಕವಾಗಿ ಭಿನ್ನಮತೀಯ ಈಶ್ವರಪ್ಪರನ್ನ ವಿಪಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಮತ್ತು ಸಂತೋಷ್ ಜಿ ವಿರುದ್ಧವೂ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ