Webdunia - Bharat's app for daily news and videos

Install App

ಈಶ್ವರಪ್ಪಗೆ ಕಜಕಿಸ್ತಾನದಿಂದ ಬೆದರಿಕೆ ಕರೆ

Webdunia
ಸೋಮವಾರ, 15 ಮೇ 2023 (20:40 IST)
ನಿನ್ನೆ ರಾತ್ರಿ ನನಗೆ ಕಜಕಿಸ್ತಾನದಿಂದ ಬೆದರಿಕೆ ಕರೆ ಬಂದಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಿನ್ನೆ ರಾತ್ರಿ ನಾನು ಮೊಬೈಲ್​​​ ಸೈಲೆಂಟ್ ಮಾಡಿ ಮಲಗಿದ್ದೆ. ನನಗೆ ಮಿಸ್ಡ್ ಕಾಲ್ ಬಂದಿದೆ. ಕಜಕಿಸ್ತಾನದಿಂದ ವಾಟ್ಸಪ್ ಕಾಲ್ ಬಂದಿದೆ ಎಂದು ತಿಳಿಸಿದ್ರು. ಇದು ಹೇಡಿಗಳು ಮಾಡುವ ಕೆಲಸ. ಈ ಸಂಬಂಧ ನಾನು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ನೀಡುತ್ತಿದ್ದೇನೆ. ಜೈಲಿನಲ್ಲಿರುವಂತಹ ವ್ಯಕ್ತಿಯ ಡೈರಿಯಲ್ಲಿ ನನ್ನ ಹೆಸರು ಉಲ್ಲೇಖವಾಗಿತ್ತು. NIA ಅಧಿಕಾರಿಗಳು ತನಿಖೆ ನಡೆಸುವ ವೇಳೆ ಈ ಬಗ್ಗೆ ಬಹಿರಂಗವಾಗಿತ್ತು. ನಿನ್ನೆ ರಾತ್ರಿ ನನಗೆ ಬೆದರಿಕೆ ಕರೆ ಮತ್ತೆ ಬಂದಿದೆ ಎಂದು ತಿಳಿಸಿದ್ರು. ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿತ್ತು. ಈ ಬಗ್ಗೆ NIA ತನಿಖೆ ಮಾಡಿತ್ತು. ಸಾಹಿಲ್ ಶೇಖ್ ಎಂಬಾತನ ಬಂಧನವಾಗಿತ್ತು. ಆಗ ನನಗೂ ಬೆದರಿಕೆ ಇರುವುದು ಗೊತ್ತಾಗಿದೆ ಎಂದು ತಿಳಿಸಿದ್ರು. ರಾಷ್ಟ್ರ ವಿರೋಧಿ ಚಟುವಟಿಕೆ ನಡೆಯುತ್ತಿದೆ. ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ. ಈ ಬಗ್ಗೆ ಬೆಳಗಾವಿಯ ಟಿಳಕವಾಡಿ ಠಾಣೆಯಲ್ಲಿ ಸುಮೊಟೊ ದೂರು ದಾಖಲಾಗಿದೆ. ಶಿರಸಿಯಲ್ಲೂ ಹಸಿರು ಧ್ವಜ ಹಾರಾಟವಾಗಿದೆ. ಪಾಕ್ ಪರ ಏಜೆಂಟರು ನಮ್ಮ ರಾಜ್ಯದಲ್ಲಿ ಚಿಗುರೊಡೆಯುತ್ತಿದ್ದಾರೆ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಮುಂದಿನ ಸುದ್ದಿ
Show comments