Select Your Language

Notifications

webdunia
webdunia
webdunia
webdunia

ಮೋದಿ ಫೋಟೋ ಬಳಗೆ ನನಗೆ ಅವಕಾಶ, ಇದು ಬಿಜೆಪಿ ನಾಯಕರಿಗೆ ಮುಖಭಂಗ ಎಂದ ಈಶ್ವರಪ್ಪ

ಮೋದಿ ಫೋಟೋ ಬಳಗೆ ನನಗೆ ಅವಕಾಶ, ಇದು ಬಿಜೆಪಿ ನಾಯಕರಿಗೆ ಮುಖಭಂಗ ಎಂದ ಈಶ್ವರಪ್ಪ

Sampriya

ಶಿವಮೊಗ್ಗ , ಗುರುವಾರ, 2 ಮೇ 2024 (15:09 IST)
ಶಿವಮೊಗ್ಗ: ಪ್ರಚಾರದ ವೇಳೆ ಪ್ರಧಾನಿ ಮೋದಿಯವರ ಫೋಟೋ ಬಳಕೆಗೆ ನನಗೆ ಅಧಿಕಾರ ಸಿಕ್ಕಿದ್ದು, ಇನ್ಮುಂದೆ ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡುತ್ತೇನೆ. ಅದಲ್ಲದೆ ನರೇಂದ್ರ ಮೋದಿಯವರ ವಿಚಾರಧಾರೆಯನ್ನು ನಾನು ಎಲ್ಲರಿಗೂ ತಿಳಿಸುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮೋದಿ ಫೋಟೋ ಬಳಸದಂತೆ ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಇದೀಗ ಮೋದಿ ಫೋಟೊ ಬಳಕೆಗೆ ನನಗೆ ಅವಕಾಶ ಸಿಕ್ಕಿದ್ದು, ದೂರು ನೀಡಿದ್ದವರಿಗೆ ಮುಖಭಂಗವಾಗಿದೆ ಎಂದರು.

ನಾನು ಪಕ್ಷೇತರವಾಗಿ ಸ್ಪರ್ಧೆಗೆ ಇಳಿದಾಗ ಪ್ರಧಾನಿ ಮೋದಿ ಅವರ ಫೋಟೋವನ್ನು ಬಳಸಿದ್ದಕ್ಕೆ ಬಿಜೆಪಿ ನಾಯಕರು ಅದನ್ನು ವಿರೋಧಿಸಿ ಚುನಾವಣಾ ಆಯೋಗ ಹಾಗೂ ಕೋರ್ಟ್ ಮೆಟ್ಟಿಲೇರಿದ್ದರು.  ಆದರೆ ಅವರಿಗೆ ಇದೀಗ ಮುಖಭಂಗವಾಗಿದೆ.

ಮೋದಿ ಅವರನ್ನು ನನ್ನ ಹೃದಯದಲ್ಲಿ ‌ಇಟ್ಟುಕೊಂಡಿದ್ದೇನೆ. ನಿಮ್ಮ ಮನೆಯಲ್ಲಿ ಪೋಟೋ ‌ಇಟ್ಟುಕೊಳ್ಳಬೇಡಿ‌ ಅಂದರೆ ಹೇಗೆ? ಮೋದಿ ಅವರು ನನಗೆ ಮಾದರಿ ವ್ಯಕ್ತಿ, ಆದರ್ಶ ವ್ಯಕ್ತಿ. ನನ್ನ ಜೀವನಪೂರ್ತಿ ಮೋದಿ ಪೋಟೋ ಇಟ್ಟುಕೊಳ್ಳುತ್ತೇನೆ. ಯಾವುದೇ ಪಕ್ಷ ಅಥವಾ ವ್ಯಕ್ತಿ ನನ್ನನ್ನು ಮೋದಿಯವರಿಂದ ಬೇರ್ಪಡಿಸಲು ಸಾಧ್ಯವಿಲ್ಲ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ಕಿರುಕುಳ ಆರೋಪ: ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಬದಲಿಗೆ ಮಗನಿಗೆ ಟಿಕೆಟ್ ಸಾಧ್ಯತೆ