Select Your Language

Notifications

webdunia
webdunia
webdunia
webdunia

ಎಸ್ಕಾಂ ಆನ್ ಲೈನ್ ಸೇವೆ ಸ್ಥಗಿತ

ವಿದ್ಯುತ್

geetha

bangalore , ಮಂಗಳವಾರ, 5 ಮಾರ್ಚ್ 2024 (19:00 IST)
ಬೆಂಗಳೂರು-ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್‌ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ. ಆನ್ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ ಎಂದು ತಿಳಿಸಿದೆ.
 
ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು ಎಂದು ಪ್ರಕಟಣೆ ತಿಳಿಸಿದೆ, ಆದರೆ ಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲವೆಂದು ಈ ಮೂಲಕ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಮಾಪಕ ಓದುಗರು ಗ್ರಾಹಕರಿಗೆ ಬಿಲ್ ಗಳನ್ನು ನೀಡಲಿದ್ದಾರೆ.
 
ನಗರದ ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರಿನಲ್ಲಿ ಸೇವೆ ಸ್ಥಗಿತವಾಗಲಿದೆ ಎಂದು ಮಾಹಿತಿ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಂಡನ್ ರಾಣಿಯ ಕಿರೀಟದಲ್ಲಿನ ಕೊಹಿನೂರು ಸೀಕ್ರೆಟ್ ಏನು..?