ಬೆಂಗಳೂರು (ಆ.11): ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ರಾಜ್ಯಾದ್ಯಂತ ಪದವಿ ಪೂರ್ವ ಕಾಲೇಜುಗಳಲ್ಲಿ ಮಂಗಳವಾರದಿಂದ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಮೊದಲ ದಿನವೇ ಭಾರೀ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕಾಲೇಜುಗಳತ್ತ ಧಾವಿಸಿ ಲಭ್ಯ ಕೋರ್ಸುಗಳ ಮಾಹಿತಿ ಪ್ರವೇಶ ಶುಲ್ಕದ ಮಾಹಿತಿ ಪಡೆದಿದ್ದು ಕಂಡುಬಂತು.