Publish Date: Sun, 27 Jan 2019 (15:02 IST)
Updated Date: Sun, 27 Jan 2019 (15:03 IST)
ವಾಲ್ಮೀಕಿ ಭವನ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದರು ಚಾಲನೆ ನೀಡಿದ್ದಾರೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಹೆಚ್.ಡಿ.ಕೋಟೆ ಕ್ಷೇತ್ರದ ವ್ಯಾಪ್ತಿಯ ಕೋಳಗಾಲ ಗ್ರಾಮದಲ್ಲಿ ವಾಲ್ಮೀಕಿ ಭವನ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.
ಸಂಸದರಾದ ಆರ್. ಧ್ರುವನಾರಾಯಣ್, ಶಾಸಕ ಅನಿಲ್ ಚಿಕ್ಕಮಾದು ಜೊತೆಗೂಡಿ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮುದಾಯದ ಜನತೆಗೆ ಭವನವನ್ನು ಸುಂದರವಾಗಿ ಹಾಗೂ ತ್ವರಿತವಾಗಿ ಪೂರ್ಣಗೊಳಿಸಿ ಉಪಯೋಗಕ್ಕೆ ನೀಡುವಂತಾಗಬೇಕೆಂದು ಹೇಳಿದರು.
ಜಿಲ್ಲಾ ಪಂಚಾಯತ್ ಸದಸ್ಯರು , ತಾಲ್ಲೂಕು ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.