ಜೆ.ಸಿ.ರಸ್ತೆ ಫ್ಲೈ ಓವರ್ ಅಂದಾಜು ವೆಚ್ಚ ಹೆಚ್ಚಳ

Webdunia
ಮಂಗಳವಾರ, 20 ಡಿಸೆಂಬರ್ 2022 (17:13 IST)
ಬೆಂಗಳೂರು ಜೆ.ಸಿ. ರಸ್ತೆ ಮೇಲ್ಸೇತುವೆ ಅಂದಾಜು ವೆಚ್ಚ ₹50 ಕೋಟಿಯಷ್ಟು ಹೆಚ್ಚಾಗಿದ್ದು , 220 ಕೋಟಿಯಿಂದ 270 ಕೋಟಿಗೆ ತಲುಪಿದೆ. ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಸಭೆಯಲ್ಲಿ ಮಂಗಳವಾರ ಈ ಯೋಜನೆಯ ಅನುಮೋದನೆ ಬಗ್ಗೆ ಚರ್ಚೆ ನಡೆಯಲಿದೆ. ಮಿನರ್ವ ವೃತ್ತದಿಂದ ಟೌನ್ ಹಾಲ್ ಮೂಲಕ ಹಡ್ಸನ್ ವೃತ್ತದವರೆಗೆ ಏಳು ಜಂಕ್ಷನ್​​ಗಳಲ್ಲಿ ಸಿಗ್ನಲ್ ಮುಕ್ತ ಸಂಚಾರವನ್ನು ಈ ಮೇಲ್ಸೇತುವೆ ಒದಗಿಸಲಿದೆ. ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆಯಲ್ಲಿ ರಾಜ್ಯ ಸರ್ಕಾರ ₹220 ಕೋಟಿಯನ್ನು ಜೆ.ಸಿ. ರಸ್ತೆ ಮೇಲ್ಸೇತುವೆ ನಿರ್ಮಿಸಲು ಅನುಮೋದನೆ ನೀಡಿದೆ. ಯೋಜನೆಯ ತಾಂತ್ರಿಕ ವಿವರಗಳನ್ನು ಟಿಎಸಿ ಅಂತಿಮಗೊಳಿಸುವುದು ವಿಳಂಬವಾದ್ದರಿಂದ ಯೋಜನೆ ವೆಚ್ಚ ಹೆಚ್ಚಾಗಲಿದೆ ಎಂದು ಬಿಬಿಎಂಪಿ ಆತಂಕ ವ್ಯಕ್ತಪಡಿಸಿದೆ. ಮೊದಲು 2014ರಲ್ಲಿ ಈ ಮೇಲ್ಸೇತುವೆ ನಿರ್ಮಿಸಲು ಬಿಬಿಎಂಪಿ ಯೋಜಿಸಿತ್ತು. 2018ರಲ್ಲಿ ಯೋಜನೆಯನ್ನು ಕೈಬಿಟ್ಟಿತ್ತು. ಬಿಬಿಎಂಪಿಯು ಪ್ರಸ್ತುತ 1.8 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಿದ್ದು, ಇದರಿಂದ ಸಂಚಾರ ದಟ್ಟಣೆ ಶೇ 46ಷ್ಟು ಕಡಿಮೆಯಾಗಲಿದೆ. ಮಿನರ್ವ ವೃತ್ತ ಮತ್ತು ಆರ್.ವಿ. ರಸ್ತೆಯಲ್ಲಿ ರ್ಯಾಂ ಪ್ ನಿರ್ಮಾಣವಾಗಲಿದೆ. ಹಡ್ಸನ್ ವೃತ್ತದಲ್ಲಿ ಮೆಜೆಸ್ಟಿಕ್ ಹಾಗೂ ಕಸ್ತೂರ ಬಾ ರಸ್ತೆ ಕಡೆಗೆ ರ್ಯಾಂಪ್ ಇರಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments