Webdunia - Bharat's app for daily news and videos

Install App

ಬಿಜೆಪಿ ಅಧಿಕಾರಕ್ಕೆ ಬಂದ್ರು ರಾಯಣ್ಣ ಬ್ರಿಗೇಡ್ ನಿಲ್ಲುವುದಿಲ್ಲ: ಕೆ.ಎಸ್.ಈಶ್ವರಪ್ಪ

Webdunia
ಗುರುವಾರ, 5 ಜನವರಿ 2017 (07:35 IST)
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಲುವುದಿಲ್ಲ. ಅದು ಮಂದುವರೆಯಲಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ವೋಟ್ ಹಾಕಿ ಹಾಗೂ ಇವರನ್ನೆ ಮುಖ್ಯಮಂತ್ರಿ ಮಾಡಿ ಎಂದು ಹೇಳಲು ಬಂದಿಲ್ಲ. ದಲಿತ ಹಾಗೂ ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಿಸಲು ಬಂದಿದ್ದೇವೆ. ಸಮಾಜದಲ್ಲಿ ತುಳಿತಕ್ಕೊಳಗಾದವರಿಗೆ ನ್ಯಾಯ ಕೊಡಿಸುವ ಉದ್ದೇಶದಿಂದ ರಾಯಣ್ಣ ಬ್ರಿಗೇಡ್ ಆರಂಭಗೊಂಡಿದೆ ಎಂದು ಹೇಳಿದರು. 
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ  ಹಾಗೂ ವಿರಪ್ಪ ಮೊಯ್ಲಿ  ಸೇರಿದಂತೆ ಕೆಲವು ಜನ ರಾಯಣ್ಣ ಬ್ರಿಗೇಡ್ ಬಗ್ಗೆ ಟೀಕೆ ಮಾಡಿದ್ದರು. ಆದರೆ, ದಲಿತ ಹಾಗೂ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸುವ ಉದ್ದೇಶದಿಂದ ಬ್ರಿಗೇಡ್ ಆರಂಭಗೊಂಡಿದೆ. ಯಾವುದೇ ಕಾರಣಕ್ಕೂ ಬ್ರಿಗೇಡ್‌ನ ಚಟುವಟಿಗೆಗಳು ನಿಲ್ಲುವುದಿಲ್ಲ ಎಂದು ತಿಳಿಸಿದರು. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments