Select Your Language

Notifications

webdunia
webdunia
webdunia
webdunia

ಚನ್ನಪಟ್ಟಣದಲ್ಲಿ ಯೋಗೇಶ್ವರ್‌ ವಿರುದ್ಧ ಎಚ್‌ಡಿಕೆ ನಿಂತರೂ ಸೋಲು ಗ್ಯಾರಂಟಿ: ಸಿದ್ದರಾಮಯ್ಯ

Chief Minister Siddaramaiah

Sampriya

ರಾಮನಗರ , ಗುರುವಾರ, 24 ಅಕ್ಟೋಬರ್ 2024 (14:18 IST)
ರಾಮನಗರ:  ಚನ್ನಪಟ್ಟಣದ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಸ್ವತಃ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಅವರ ಪತ್ನಿ, ಪುತ್ರ ಸೇರಿದಂತೆ ಯಾರೇ ಸ್ಪರ್ಧಿಸಿದರೂ ಅವರು ಸೋಲುವುದು ಗ್ಯಾರಂಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಸಿ.ಪಿ. ಯೋಗೇಶ್ವರ್ ನಾಮಪತ್ರ ಸಲ್ಲಿಕೆಗೆ ಮುಂಚೆ ನಡೆದ ರೋಡ್ ಷೋನಲ್ಲಿ ಅವರು ಮಾತನಾಡಿದರು. ಚನ್ನಪಟ್ಟಣ ಕ್ಷೇತ್ರದಿಂದ ಎರಡು ಸಲ ಗೆದ್ದು ಒಮ್ಮೆ ಮುಖ್ಯಮಂತ್ರಿಯಾದರೂ ಕುಮಾರಸ್ವಾಮಿ ತಾಲ್ಲೂಕಿನಲ್ಲಿ ಯಾವುದೇ ಅಭಿವೃದ್ಧಿ ಮಾಡಲಿಲ್ಲ. ಈಗ ಎಲ್ಲಾ ಬಿಟ್ಟು ಮಂಡ್ಯ ಹಿಡಿದುಕೊಂಡಿದ್ದಾರೆ‌ ಎಂದು ಲೇವಡಿ ಮಾಡಿದರು.

ಕ್ಷೇತ್ರದಲ್ಲಿ ಕೆರೆಗಳು ತುಂಬಿದ್ದರೆ ಅದಕ್ಕೆ ಯೋಗೇಶ್ವರ್ ಕಾರಣ.‌ ಅಭಿವೃದ್ಧಿ ಪರ ಕೆಲಸ ಮಾಡುವ ಇಂತಹ ನಮ್ಮ ಅಭ್ಯರ್ಥಿಯನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಐದು ಸಲ ಶಾಸಕರಾಗಿ, ಎರಡು ಸಲ ಸಚಿವರಾಗಿರುವ ಯೋಗೇಶ್ವರ್ ಮೂಲತಃ ಕಾಂಗ್ರೆಸ್ ನವರು. ನಮ್ಮ ಪಕ್ಷಕ್ಕೆ ವಾಪಸ್ ಬಂದ ಅವರನ್ನು ಅಭ್ಯರ್ಥಿ ಮಾಡಿದ್ದೇವೆ. ಚನ್ನಪಟ್ಟಣದಲ್ಲಿ ಯೋಗೇಶ್ವರ್ ಜನಪ್ರಿಯ ರಾಜಕಾರಣಿ. ಅವರಿಂದ ಕ್ಷೇತ್ರವು ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನ ಪರಿಷತ್ ಉಪ ಚುನಾವಣೆ: ಬಿಜೆಪಿಯ ಕಿಶೋರ್ ಕುಮಾರ್ ಜಯಭೇರಿ