Select Your Language

Notifications

webdunia
webdunia
webdunia
webdunia

ಶಾಸಕ ಮುನಿರತ್ನಗೆ ಜಾಮೀನು ಸಿಕ್ಕರೂ ಮತ್ತೇ ಲಾಕ್‌ ಆಗುವ ಸಾಧ್ಯತೆ

ಶಾಸಕ ಮುನಿರತ್ನಗೆ ಜಾಮೀನು ಸಿಕ್ಕರೂ ಮತ್ತೇ ಲಾಕ್‌ ಆಗುವ ಸಾಧ್ಯತೆ

Sampriya

ಬೆಂಗಳೂರು , ಗುರುವಾರ, 19 ಸೆಪ್ಟಂಬರ್ 2024 (17:56 IST)
ಬೆಂಗಳೂರು: ಕೊಲೆ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ಮುನಿರತ್ನಗೆ ಜಾಮೀನು ಮಂಜೂರಾಗಿದೆ.

ಆದರೆ ಆತ್ಯಾಚಾರ ಪ್ರಕರಣದಡಿಯಲ್ಲಿ ಮುನಿರತ್ನ ಅವರನ್ನು ಮತ್ತೇ ಪೊಲೀಸರು ಲಾಕ್ ಮಾಡುವ ಸಾಧ್ಯತೆ ಹೆಚ್ಚಿದೆ.  ಜಾಮೀನು ಕೋರಿ ಮುನಿರತ್ನ ಸಲ್ಲಿಸಿದ್ದ ಅರ್ಜಿ ಬಗ್ಗೆ ವಾದ, ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.

ಬುಧವಾರ ನಡೆದ ವಿಚಾರಣೆ ವೇಳೆ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ, ಇದು ಆರೇಳು ವರ್ಷದ ಹಳೆಯ ಪ್ರಕರಣ. ಚಲುವರಾಜು ಉಪಸ್ಥಿತಿಯಲ್ಲಿ ಆದ ಘಟನೆ. ಸಾರ್ವಜನಿಕರ ಮುಂದೆ ನಡೆದ ನಿಂದನೆ ಅಲ್ಲ ಎಂದು ವಾದಿಸಿದ್ದರು.  ಸೆಕ್ಷನ್ ಪ್ರಕಾರ ಜಾತಿ ನಿಂದನೆ ಮಾಡುವಾಗ ಇಬ್ಬರಿಗಿಂತ ಹೆಚ್ಚು ಜನ ಇರಬೇಕು. ಗುಂಪಿನಲ್ಲಿ ಜಾತಿನಿಂದನೆ ಮಾಡಿರಬೇಕು. ಇಲ್ಲಿ ಚಲುವರಾಜುನೇ ನಿಜವಾದ ಆರೋಪಿ ಎಂದು ವಾದ ಮಂಡಿಸಿದ್ದರು.

ಇದು ಮುನಿರತ್ನ ವಿರುದ್ಧ ನಡೆದ ರಾಜಕೀಯ ಕುತಂತ್ರ. ಈಗಾಗಲೇ ಆರೋಪಿಯ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಿ ಆಗಿದೆ. ಸಾಕ್ಷಿದಾರರ ಹೇಳಿಕೆಯೂ ದಾಖಲಾಗಿದೆ. ಈಗ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಜಾಮೀನು ನೀಡಬಹುದು ಎಂದು ವಕೀಲರು ಕೋರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೇರೆ ದೇಶಕ್ಕೆ ಜೈಕಾರ ಹಾಕಿದರೆ ತಪ್ಪು, ಪ್ಯಾಲೆಸ್ತೀನ್ ಧ್ವಜ ಹಿಡಿದರೆ ಏನು ತಪ್ಪು: ಜಮೀರ್ ಅಹ್ಮದ್