Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‌ ಮತ್ತು ಪಾಕಿಸ್ತಾನ ನಡುವೆ ಎಂದೂ ಸೋಲದ ಶಾಶ್ವತ ಪ್ರೇಮ!

ಕಾಂಗ್ರೆಸ್‌ ಮುಖಂಡ ಬಿ.ಕೆ. ಹರಿಪ್ರಸಾದ್‌

geetha

bangalore , ಶನಿವಾರ, 2 ಮಾರ್ಚ್ 2024 (17:30 IST)
ಬೆಂಗಳೂರು : ಶುಕ್ರವಾರ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ  ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷವು  ಕಾಂಗ್ರೆಸ್‌  ವಿರುದ್ದ ತೀವ್ರ ವಾಗ್ದಾಳಿ ನಡೆಸಿದೆ. ಈ ಕುರಿತು ಎಕ್ಸ್‌ ಮೂಲಕ ಕಾಂಗ್ರೆಸ್‌ ಹಾಗೂ ಪಾಕಿಸ್ತಾನದ ಪೋಸ್ಟರ್‌ ಹಂಚಿಕೊಂಡಿರುವ ಬಿಜೆಪಿ,  ಇವರ ನಡುವಿನ ನಿಜವಾದ ಪ್ರೇಮಕ್ಕೆ ಸೋಲೇ ಇಲ್ಲ ಎಂದು ವ್ಯಂಗ್ಯವಾಡಿದೆ. 
 
ಇದೇ ವೇಳೆ ಬಿಜೆಪಿ ಮುಖಂಡ ಅಮಿತ್‌ ಮಾಳವೀಯ ಅವರೂ ಸಹ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾಸಿರ್‌ ಹುಸೇನ್‌ ವಿಜಯೋತ್ಸವದ ವೇಳೆ ಪಾಕ್‌ ಪರ ಘೋಷಣೆ ಕೂಗಲಾಗಿದೆ. ಕಾಂಗ್ರೆಸ್‌ ಮುಖಂಡ ಬಿ.ಕೆ. ಹರಿಪ್ರಸಾದ್‌ ಪಾಕಿಸ್ತಾನ ನಮ್ಮ ಶತ್ರುವಲ್ಲ ಎಂದಿದ್ದಾರೆ. ಇತ್ತೀಚಿಗಷ್ಟೇ ಸರ್ಕಾರವು ರಾಷ್ಟ್ರವಿರೋದಿ ಮನಸ್ಥಿತಿಯುಳ್ಳವರನ್ನು ಭಾಷಣಕ್ಕೆ ಆಹ್ವಾನಿಸಿತ್ತು. ಕಾಂಗ್ರೆಸ್‌ ಕರ್ನಾಟಕದಲ್ಲಿ ಮೊದಲ ಸ್ಥಾನ ಗಳಿಸಲು ಅವರು ಹಿಂದುಳಿದವರ್ಗವನ್ನು ಮಣಿಸಲು ಸಮಾಜಘಾತುಕರಿಗೆ ಮಣೆ  ಹಾಕುತ್ತಿರುವುದೇ ಕಾರಣ ಎಂದು ಟೀಕಿಸಿದ್ದಾರೆ.

 ಇದರ  ಜೊತೆಗೆ ಫಲಿತಾಂಶವಾಗಿ ರಾಮೇಶ್ವರ ಕೆಫೆಯಲ್ಲಿ ಬಾಂಬ್‌ ಸ್ಫೋಟ ನಡೆದಿದೆ. ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬರುತ್ತಿದ್ದಂತೆಯೇ ಭಾರತದ ನಗರಗಳಲ್ಲಿ ಉಗ್ರರ ಅಟ್ಟಹಾಸ ಮುಂದುವರೆಯಲಿದೆ. ಯುಪಿಎ ಯುಗ ಮರುಕಳಿಸಲಿದೆ ಎಂದು ಮಾಳವೀಯ ಆರೋಪಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಿಂದ ತುಮಕೂರಿಗೆ ಮೆಟ್ರೋ ಸಂಪರ್ಕ..!