Publish Date: Wed, 20 Apr 2022 (21:02 IST)
Updated Date: Wed, 20 Apr 2022 (21:05 IST)
ಮೈಸೂರಿನ ದೇವರಾಜ ಮಾರುಕಟ್ಟೆ ಉಳಿಸಲು ಆಗ್ರಹಿಸಿ ವರ್ತಕರು ನಡೆಸಿದ ಪ್ರತಿಭಟನೆಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಿಕ್ಕಗಡಿಯಾರದ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ್ರು. ರಾಜ್ಯದಲ್ಲಿ ಕೋಮು ಸಂಘರ್ಷ ಕದಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಜವಂಶಸ್ಥ ಯದುವೀರ್, ಎಲ್ಲರಿಗೂ ಕೈಮುಗಿದು ಬೇಡುತ್ತೇನೆ, ಶಾಂತಿಯಿಂದ ಇರಿ ಎಂದು ಮನವಿ ಮಾಡಿದರು.