Select Your Language

Notifications

webdunia
webdunia
webdunia
webdunia

ಸಮಾಜದಲ್ಲಿ ಎಲ್ಲರೂ ಸಮಾನರು: ಆರ್. ಅಶೋಕ್

r.ashok karnataka minister karnataka dalith ದಲಿತ ಆರ್.ಅಶೋಕ್ ಕರ್ನಾಟಕ
, ಭಾನುವಾರ, 19 ಜೂನ್ 2022 (17:23 IST)

ಜಿಲ್ಲಾಧಿಕಾರಿಗಳ ನ‌ಡೆ ಹಳ್ಳಿಯ ಕಡೆ ಕಾರ್ಯಕ್ರಮ ನಿಮಿತ್ತ ಮಾಯಸಂದ್ರ ಗ್ರಾಮದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರು ಇಂದು ಬೆಳಿಗ್ಗೆ ದಲಿತರ ಮನೆಯಲ್ಲಿ ಉಪಹಾರ ಸೇವಿಸಿದರು.

ರಾತ್ರಿ ಮಾಯಸಂದ್ರದ ಆದಿಚುಂಚಗಿರಿಯ ಮಠದ ಶಾಲೆಯ ಆಶ್ರಮದಲ್ಲಿ ಶಾಸಕ ಮಸಾಲೆ ಜಯರಾಂ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಉಪವಿಭಾಗಾಧಿಕಾರಿಗಳಾದ ಅಜಯ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ವಾಸ್ತವ್ಯ ಹೂಡಿದ್ದರು.

ಬೆಳಿಗ್ಗೆ ಅಧಿಕಾರಿಗಳೊಂದಿಗೆ ಗ್ರಾಮದ ಸುತ್ತಾಟ ನಡೆಸಿದ ಸಚಿವ ಅಶೋಕ್ ಅವರು ಬೆಳಿಗ್ಗೆ ಮಾಯಸಂದ್ರದ ಗೂಡಂಗಡಿಗೆ ತೆರಳಿ ಚಹಾ ಸೇವಿಸಿದರು.

ನಂತರ ದಲಿತ ಕೇರಿಗೆ ತೆರಳಿದ ಸಚಿವರು ದಲಿತ ಕುಟುಂಬದ ವಿನೋದ್ ಎಂಬುವರ ಮನೆಯಲ್ಲಿ ಅಲ್ಲಿಯೇ ಸಿದ್ದಪಡಿಸಿದ್ದ ಅಕ್ಕಿರೊಟ್ಟಿ, ಹುಚ್ಚೆಳ್ಳು ಚಟ್ನಿ, ಕೇಸರಿಬಾತ್, ಉಪ್ಪಿಟ್ಟು ಹಾಗೂ ಚಿತ್ರಾನ್ನ ಸವಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸ ಮಾಡುತ್ತಿದೆ : ಸಿಎಂ