Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ;ಜಾರಕಿಹೊಳಿ ತಿರುಗೇಟು

webdunia
ಶನಿವಾರ, 16 ಅಕ್ಟೋಬರ್ 2021 (12:51 IST)
ಹಾವೇರಿ : ವಿರೋಧ ಪಕ್ಷದ ಸ್ಥಾನಕ್ಕಾಗಿ ಸಿದ್ದರಾಮಯ್ಯ ನಮ್ಮ ಸರ್ಕಾರವನ್ನು ಬೀಳಿಸಿದರು ಎಂಬ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ, ಸಮ್ಮಿಶ್ರ ಸರ್ಕಾರ ಪತನವಾಗಿ ಮತ್ತೊಂದು ಸರ್ಕಾರ ಬಂದಿದೆ.

ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ. ಸಮ್ಮಿಶ್ರ ಸರ್ಕಾರ ಪತನವಾಗಿರುವ ಬಗ್ಗೆ ಈಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಹೆಚ್ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಕಾಂಗ್ರೆಸ್ ಮುಳುಗುವ ಹಡಗು ಎಂಬ ಆರೋಪದ ವಿಚಾರವಾಗಿ ಬಿಜೆಪಿಯ ಆರೋಪಕ್ಕೆ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಏನಾಗಿದೆ?, ಬಿಜೆಪಿಯವರ ಪರಿಸ್ಥಿತಿ ಏನಾಗಿದೆ? ಎಂದು ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ. ಯಾರನ್ನೂ ಯಾರೂ ಮುಳುಗಿಸುವುದಕ್ಕೆ ಆಗುವುದಿಲ್ಲ. ಮತದಾರರು ಎಲ್ಲವನ್ನೂ ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ದುರ್ಗಾ ಭಕ್ತರ ಮೇಲೆ ಹರಿದ ಕಾರು; CCTV ಯಲ್ಲಿ ದೃಶ್ಯ ಸೆರೆ