Select Your Language

Notifications

webdunia
webdunia
webdunia
webdunia

ಭಾಷೆ, ನೆಲ, ಜಲದ ವಿಷಯದಲ್ಲಿ ರಾಜಕೀಯ ಸಲ್ಲದು: ಜಯಮಾಲಾ

ಭಾಷೆ, ನೆಲ, ಜಲದ ವಿಷಯದಲ್ಲಿ ರಾಜಕೀಯ ಸಲ್ಲದು: ಜಯಮಾಲಾ
ಹಾವೇರಿ , ಗುರುವಾರ, 22 ಸೆಪ್ಟಂಬರ್ 2016 (09:39 IST)
ಭಾಷೆ, ನೆಲ ಹಾಗೂ ಜಲದ ವಿಷಯ ಬಂದಾಗ ಕರ್ನಾಟಕ ರಾಜ್ಯವೇ ಒಂದು ಕುಟುಂಬವಾಗಿ ಹೋರಾಟ ಮಾಡಬೇಕು ಎಂದು ನಟಿ ಜಯಮಾಲಾ ಅಭಿಪ್ರಾಯಪಟ್ಟಿದ್ದಾರೆ. 
 
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಕಾವೇರಿ ವಿಷಯದಲ್ಲಿ ಯಾರು ರಾಜಕೀಯ ಮಾಡಬಾರದು ಎಂದು ಹೇಳಿದರು.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಲ್ಲಿ ಅಶಾಂತಿ ಉಂಟಾಗುತ್ತಿದೆ. ರಾಜ್ಯದ ಜನತೆ ಶಾಂತಿಯುತವಾಗಿ ಹೋರಾಟಕ್ಕೆ ಮುಂದಾಗಬೇಕು. ಹಿಂಸಾತ್ಮಕ ಪ್ರತಿಭಟನೆಗೆ ಯಾರು ಅವಕಾಶ ಮಾಡಿಕೊಡಬಾರದು ಎಂದು ಮನವಿ ಮಾಡಿಕೊಂಡರು.  
 
ಮಂಡ್ಯದ ರೈತರಿಗೆ ಬಂದ ಸ್ಥಿತಿ ನಾಳೆ ಎಲ್ಲಾ ಜಿಲ್ಲೆಗೂ ಬರಬಹುದು. ಅದಕ್ಕಾಗಿ ಎಲ್ಲರೂ ಒಂದಾಗಿ ಹೋರಾಟ ಮಾಡಬೇಕು ಎಂದು ನಟಿ ಜಯಮಾಲಾ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ನದಿ ತೋರಿಸುವುದಾಗಿ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ