ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಂಧನ ಭೀತಿ

Krishnaveni K
ಗುರುವಾರ, 13 ಜೂನ್ 2024 (10:03 IST)
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಂಧನ ಭೀತಿ ಎದುರಾಗಿದೆ.
 

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ನಿನ್ನೆ ವಿಚಾರಣೆಗೆ ಅವರು ಸಿಐಡಿ ಅಧಿಕಾರಿಗಳ ಮುಂದೆ ಹಾಜರಾಗಬೇಕಿತ್ತು. ಆದರೆ ಅವರು ಗೈರಾಗಿದ್ದರು. ವಿಚಾರಣೆಗೆ ಹಾಜರಾಗಲು ಜೂನ್ 17 ರವರೆಗೆ ಸಮಯ ಕೊಡಿ ಎಂದು ಕೇಳಿದ್ದರು. ನನ್ನಿಂದ ತಪ್ಪಾಗಿಲ್ಲ. ಪ್ರಕರಣ ರದ್ದು ಮಾಡಿ ಎಂದು ಹೈಕೋರ್ಟ್ ಗೂ ಮೊರೆ ಹೋಗಿದ್ದಾರೆ.

ಆದರೆ ಇದೀಗ ವಿಚಾರಣೆಗೆ ಹಾಜರಾಗದ ಬಿಎಸ್ ವೈ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಬೇಕೆಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಆಗ್ರಹಿಸಿದ್ದಾರೆ. ಒಂದು ವೇಳೆ ನ್ಯಾಯಾಲಯ ಇದನ್ನು ಪುರಸ್ಕರಿಸಿದರೆ ಬಿಎಸ್ ಯಡಿಯೂರಪ್ಪರನ್ನು ತನಿಖಾಧಿಕಾರಿಗಳು ತಕ್ಷಣವೇ ಬಂಧಿಸಲಿದ್ದಾರೆ.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮಹಿಳೆಯೊಬ್ಬರು ಸಹಾಯ ಕೇಳಿಕೊಂಡು ಬಿಎಸ್ ವೈ ಮನೆಗೆ ಹೋಗಿದ್ದಾಗ ನನ್ನ ಅಪ್ರಾಪ್ತ ಮಗಳ ಜೊತೆ ಅವರು ಅನುಚಿತವಾಗಿ ನಡೆದುಕೊಂಡಿದ್ದಾರೆ ಎಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಡಾ ಮಹೇಂದ್ರ ರೆಡ್ಡಿ ಇವನೆಂಥಾ ಗಂಡ... ಹೆಂಡತಿ ಡಾ ಕೃತಿಕಾ ರೆಡ್ಡಿ ಕೊಂದ ಬಳಿಕ ಏನು ಮಾಡಿದ್ದ ಗೊತ್ತಾ

ಮುಂದಿನ ಸುದ್ದಿ