Publish Date: Sun, 09 Jan 2022 (18:11 IST)
Updated Date: Sun, 09 Jan 2022 (18:09 IST)
ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆಯಲ್ಲಿ (Mekedatu Padayatre) ತೊಡಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಇದೀಗ ಜ್ವರದಿಂದ(Fever) ಬಳಲುತ್ತಿದ್ದು, ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ಪಾದಯಾತ್ರೆಯಲ್ಲಿ ಭಾಗವಹಿಸಿ ಕೆಲ ದೂರ ಸಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸುಸ್ತಾಗಿದ್ದು, ಕೂಡಲೇ ಅವರು ಕಾರಿನಲ್ಲಿ ಹೆಗ್ಗನೂರು ಗ್ರಾಮಕ್ಕೆ ತೆರಳಿ ವಿಶ್ರಾಂತಿ ಪಡೆದಿದ್ದಾರೆ.
ಬಳಿಕ ಸಿದ್ದರಾಮಯ್ಯನವರಿಗೆ ಜ್ವರ ತೀವ್ರವಾಗಿರುವುದರಿಂದ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಗಾಗಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಸಿದ್ದರಾಮಯ್ಯ ಕೋವಿಡ್ ಬೂಸ್ಟರ್ ಡೋಸ್ ಹಾಕಿಸಿಕೊಂಡಿದ್ದರು. ಬೂಸ್ಟರ್ ಡೋಸ್ ಪಡೆದ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಮಾಜಿ ಸಿಎಂ ಜ್ವರದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.