ಮಳೆಗಾಲಕ್ಕೂ ಮುಂಚೆ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೆ ಪಾಲಿಕೆ ಕೆರೆ ಮತ್ತು ಕೋಡಿಚಿಕ್ಕನಹಳ್ಳಿ ಕೆರೆ ಸುತ್ತಲಿನ ಪ್ರದೇಶಗಳು ಜಲಾವೃತವಾಗುತ್ತಿರಲಿಲ್ಲ. ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷವೇ ಬಡಾವಣೆಗಳಲ್ಲಿ ನೀರು ತುಂಬಲು ಕಾರಣ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಆರೋಪಿಸಿದ್ದಾರೆ.
ಜಲಮಂಡಳಿ ಮತ್ತು ಲೋಕೋಪಯೋಗಿ ಇಲಾಖೆಗಳ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷದಿಂದಲೇ ಈ ಬಡಾವಣೆಗಳಲ್ಲಿ ನೀರು ತುಂಬಲು ಕಾರಣವೆಂದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಲು ಬಿಬಿಎಂಪಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಗರದ ಕಾಳಜಿಯಿಂದ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಳೆಯಿಂದ ಆಗುವ ಅನಾಹುತ ಕುರಿತು ಮುನ್ನೆಚ್ಚರಿಕಾ ಸಲಹೆಗಳನ್ನು ನೀಡಿದ್ದಾರೆ. ಆದರೆ, ಬಿಬಿಎಂಪಿ ಅಧಿಕಾರಿಗಳು ನಿರ್ಲಕ್ಷವಹಿಸುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ದೂರಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ