Select Your Language

Notifications

webdunia
webdunia
webdunia
webdunia

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್‌.ವೈ.ಮೇಟಿ ವಿಧಿವಶ

HY Meti passed away, Chief Minister Siddaramaiah, Bagalkote Assembly

Sampriya

ಬೆಂಗಳೂರು , ಮಂಗಳವಾರ, 4 ನವೆಂಬರ್ 2025 (13:21 IST)
Photo Credit X
ಬೆಂಗಳೂರು:  2013ರಿಂದ 2016ರವರೆಗೆ ಸಿದ್ದರಾಮಯ್ಯ ಕ್ಯಾಬಿನೆಟ್‌ನಲ್ಲಿ ಅಬಕಾರಿ ಮಂತ್ರಿಯಾಗಿದ್ದ ಎಚ್‌.ವೈ.ಮೇಟಿ ಅವರು ಅನಾರೋಗ್ಯದಿಂದ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ  ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ  ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. 

2013 ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎಚ್‌.ವೈ.ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು. ಆ ವೇಳೆ ಲೈಂಗಿಕ ಹಗರಣದಲ್ಲಿ ಸಿಲುಕಿ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮೇಟಿ ಅವರಿಗೆ 79 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೇಟಿ ಅವರನ್ನುಈಚೆಗೆ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. 

ಮೇಟಿ ಅವರುಐದು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಗುಳೇದಗುಡ್ಡ ವಿಧಾನಸಭಾ ಕ್ಷೇತ್ರದಿಂದ ಮೂರು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಎರಡು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1996ರ ಲೋಕಸಭಾ ಚುನಾವಣೆಯಲ್ಲಿ ಬಾಗಲ ಕೋಟೆ ಕ್ಷೇತ್ರದಿಂದ ಲೋಕಸಭೆಗೂ ಜನತಾದಳದಿಂದ ಆಯ್ಕೆಯಾಗಿದ್ದರು. 

ಇನ್ನೂ ರಾಜ್ಯ ಸರ್ಕಾರದಲ್ಲಿ ಎರಡು ಭಾರಿ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ್ದರು. ಮೃತರಿಗೆ ಇಬ್ಬರು ಪುತ್ರತು, ಇಬ್ಬರು ಪುತ್ರಿಯರು ಇದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಮುಖ್ಯಮಂತ್ರಿಗಳು ಹೇಳಿರುವುದು ಸರಿಯಿದೆ: ಜಿ. ಪರಮೇಶ್ವರ್‌