ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದು ಕಾಂಗ್ರೆಸ್ ಪಕ್ಷದಿಂದ ಹೊರ ಬಂದಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ಸೇರ್ಪಡೆಯಾಗುವ ಕುರಿತು ಸುಳಿವು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 2 ನೇ ವಾರದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾಗುವ ಕುರಿತು ಮಾಹಿತಿ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ್ದರು.
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕಳೆದುಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಪ್ರಸಾದ್ ತಮ್ಮ ಶಾಸಕ ಸ್ಥಾನಕ್ಕೆ ಅ.17 ರಂದು ರಾಜೀನಾಮೆ ನೀಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ