Publish Date: Thu, 19 Jan 2017 (15:25 IST)
Updated Date: Thu, 19 Jan 2017 (15:35 IST)
ಮಾಜಿ ಸಚಿವ ವಿ.ಸೋಮಣ್ಣ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಕುರಿತು ಪರೋಕ್ಷವಾಗಿ ಸುಳಿವು ನೀಡಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಕುರಿತು ಮಾಧ್ಯಮಗಳಲ್ಲಿ ಬರುತ್ತಿದೆ. ಆದರೆ, ಈ ಸುದ್ದಿಗಳು ಸುಳ್ಳು ಎನ್ನಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಿಂದ ಈಗಷ್ಟೇ ಬೆಂಗಳೂರಿಗೆ ಬಂದಿದ್ದೇನೆ ಎಂದು ಹೇಳಿದ ಮಾಜಿ ಸಚಿವ ವಿ.ಸೋಮಣ್ಣ, ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗೆಣಿಸುವ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಮಾಜಿ ಸಚಿವ ವಿ.ಸೋಮಣ್ಣ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿದ್ದವು. ಇದೀಗ ಸೋಮಣ್ಣ ಅವರ ಹೇಳಿಕೆಯಿಂದ ಅವರು ಬಿಜೆಪಿ ಪಕ್ಷ ತೊರೆಯುವುದು ಖಚಿತ ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ