Select Your Language

Notifications

webdunia
webdunia
webdunia
webdunia

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್‌ಗೆ ಗುಡ್‌ ಬೈ

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್‌ಗೆ ಗುಡ್‌ ಬೈ
ಬೆಂಗಳೂರು , ಶನಿವಾರ, 19 ನವೆಂಬರ್ 2016 (18:20 IST)
ಚಿಕ್ಕಮಗಳೂರು ಕೇತ್ರದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ. 
 
ಈ ಕುರಿತು ನಿನ್ನೆ ಬೆಂಗಳೂರಿನಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದ್ದಾರೆ. ಜಯಪ್ರಕಾಶ್ ಹೆಗ್ಡೆ ಬಿಜೆಪಿ ಸೇರ್ಪಡೆಗೆ ಬಿಎಸ್‌ವೈ ಹಸಿರು ನಿಶಾನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವೇಳೆ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಡಿಸಿಎಂ ಆರ್.ಅಶೋಕ್ ಉಪಸ್ಥಿತರಿದ್ದರು. 
 
ಚರ್ಚೆ ಬಳಿಕ ಮಾತನಾಡಿದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕಾಂಗ್ರೆಸ್ ಪಕ್ಷ ನನ್ನನ್ನು ಹೊರಗೆ ಹಾಕಿದೆ. ಅಭಿಮಾನಿಗಳು ಬಿಜೆಪಿ ಸೇರ್ಪಡೆಯಾಗುವಂತೆ ಸಲಹೆ ನೀಡಿದ್ದಾರೆ. ಆದರೆ, ಅಧಿಕೃತವಾಗಿ ಯಾವಾಗ ಸೇರ್ಪಡೆಯಾಗಬೇಕು ಎಂದು ತೀರ್ಮಾನಿಸಿಲ್ಲ ಎಂದು ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಾಧ್ಯಾಪಕರಿಂದ ಸಾರ್ವಜನಿಕ ನಿಂದನೆ: ಉಪನ್ಯಾಸಕಿ ಆತ್ಮಹತ್ಯೆಗೆ ಯತ್ನ