Publish Date: Tue, 17 Apr 2018 (12:00 IST)
Updated Date: Tue, 17 Apr 2018 (12:01 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಮತ್ತಷ್ಟು ಮಂದಿ ಅಸಮಾಧಾನ ಹೊರ ಹಾಕಿದ್ದಾರೆ.
ಇದೀಗ ಆ ಪಟ್ಟಿಗೆ ಮಾಜಿ ಸಂಸದ ಶಿವರಾಮೇಗೌಡ ಸೇರಿದ್ದಾರೆ. ಗಂಗಾವತಿ ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವರಾಮೇಗೌಡ ‘ನನಗೆ ಟಿಕೆಟ್ ನೀಡಿಲ್ಲ ಅಂತ ಬೇಸರವಿಲ್ಲ. ಆದರೆ ನಮ್ಮ ಸಮುದಾಯಕ್ಕೆ ಇಲ್ಲಿ ಟಿಕೆಟ್ ನೀಡದೇ ಬಿಜೆಪಿ ಅನ್ಯಾಯ ಮಾಡಿದೆ’ ಎಂದು ದೂರಿದ್ದಾರೆ.
ಪಂಚಮಸಾಲಿ ಸಮುದಾಯದವರಾದ ಶಿವರಾಮೇಗೌಡ ಗಂಗಾವತಿ ಟಿಕೆಟ್ ಗೆ ಬೇಡಿಕೆಯಿಟ್ಟಿದ್ದರು. ಆದರೆ ಇದೀಗ ಅವರಿಗೆ ಟಿಕೆಟ್ ನೀಡಲಾಗಿಲ್ಲ. ಹೀಗಾಗಿ ಆಕ್ರೋಶ ವ್ಯಕ್ತಪಡಿಸಿರುವ ಅವರು ‘ನಮ್ಮ ಸಮುದಾಯದ 82 ಲಕ್ಷ ಮತದಾರರು ರಾಜ್ಯದಲ್ಲಿದ್ದಾರೆ’ ಎಂದು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.