Publish Date: Wed, 19 Aug 2020 (10:51 IST)
Updated Date: Wed, 19 Aug 2020 (23:00 IST)
ರಾಜ್ಯದ ಬಿಜೆಪಿ ಮಾಜಿ ಶಾಸಕರೊಬ್ಬರು ಡೆಡ್ಲಿ ಕೊರೊನಾಗೆ ಬಲಿಯಾಗಿದ್ದಾರೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ 1999 ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದ ಸಿ.ಗುರುಸ್ವಾಮಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೋವಿಡ್ – 19 ದೃಢಪಡುತ್ತಿದ್ದಂತೆ ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರೂ, ಚಿಕಿತ್ಸೆಗೆ ಸ್ಪಂದಿಸದೇ ಮಾಜಿ ಶಾಸಕ ಸಿ.ಗುರುಸ್ವಾಮಿ ನಿಧನರಾಗಿದ್ದಾರೆ.
ಬಿಜೆಪಿ ಮುಖಂಡರು, ಸಚಿವರು ಮಾಜಿ ಶಾಸಕರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.