Select Your Language

Notifications

webdunia
webdunia
webdunia
webdunia

ಪ್ರಶ್ನೆ ಪತ್ರಿಕೆ ಸೋರಿಕೆ: ಸಿಐಡಿ ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ

ಪ್ರಶ್ನೆ ಪತ್ರಿಕೆ ಸೋರಿಕೆ: ಸಿಐಡಿ ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಗುರುವಾರ, 31 ಮಾರ್ಚ್ 2016 (11:41 IST)
ದ್ವಿತಿಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಘಟನೆಯ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವುದು ನಿಜ. ಈಗಾಗಲೇ ಸಿಐಡಿ ಅಧಿಕಾರಿಗಳು ತನಿಖೆಯನ್ನು ಆರಂಭಿಸಿದ್ದಾರೆ. ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಮಾಧಾನವಾಗುವಂತಹ ತೀರ್ಮಾನ ಕೈಗೊಳ್ಳಲು ಆದೇಶ ನೀಡಿದ್ದೇನೆ ಎಂದು ಹೇಳಿದ್ದಾರೆ.
 
ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ರಾಜೀನಾಮೆ ನೀಡುವ ಅಗತ್ಯವಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ತಪ್ಪು. ಘಟನೆಗೆ ಕಾರಣರಾದವರನ್ನು ಮುಲಾಜಿಲ್ಲದೇ ಬಂಧಿಸುತ್ತೇವೆ ಎಂದು ಭರವಸೆ ನೀಡಿದರು.
 
ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಬಾರದು. ಮುಂಬರುವ ದಿನಗಳಲ್ಲಿ ಇಂತಹ ಸೋರಿಕೆಯಾಗದಂತೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Share this Story:

Follow Webdunia kannada