Webdunia - Bharat's app for daily news and videos

Install App

ಪ್ರಶ್ನೆಪತ್ರಿಕೆ ಸೋರಿಕೆ ಹಿಂದೆ ದೊಡ್ಡ ಕುಳಗಳ ಕೈವಾಡ: ದತ್ತಾ

Webdunia
ಗುರುವಾರ, 31 ಮಾರ್ಚ್ 2016 (10:59 IST)
ಪಿಯುಸಿ ದ್ವಿತಿಯ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆಯ ಸೋರಿಕೆಯ ಹಿಂದೆ ಸಣ್ಣ ಪುಟ್ಟ ಕುಳಗಳ ಕೈವಾಡವಿಲ್ಲ. ದೊಡ್ಡ ದೊಡ್ಡ ಕುಳಗಳ ಕೈವಾಡವಿದೆ ಎಂದು ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತಾ ಆರೋಪಿಸಿದ್ದಾರೆ.
 
ಪಿಯುಸಿ ಮಂಡಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುರೇಶ್ ತುಂಗಾ ಎನ್ನುವ ವ್ಯಕ್ತಿ ಪ್ರಶ್ನೆಪತ್ರಿಕೆಗಳ ಸೋರಿಕೆಗೆ ಕಾರಣವಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಸುರೇಶ್ ತುಂಗಾ ಯಾರು ಎನ್ನುವುದು ಕಂಡುಹಿಡಿದು ವಿಚಾರಣೆಗೊಳಪಡಿಸಿ ಎಂದು ಒತ್ತಾಯಿಸಿದರು.
 
ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಓರ್ವ ಸಭ್ಯ, ಸುಂಸ್ಕ್ರತಿ ರಾಜಕಾರಣಿಯಾಗಿದ್ದಾರೆ. ಪ್ರಶ್ನೆಪತ್ರಿಕೆಯ ಹಿಂದೆ ಯಾರ ಕೈವಾಡವಿದೆ ಎನ್ನುವುದು ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ. 
 
ಮೊದಲ ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾದಾಗ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿತ್ತು. ಇದು ಸರಕಾರದ ವೈಫಲ್ಯವಾಗಿದೆ. ಕೂಡಲೇ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು ಎಂದು ಜೆಡಿಎಸ್ ಮುಖಂಡ ವೈ.ಎಸ್.ದತ್ತಾ ಎಚ್ಚರಿಕೆ ನೀಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments