Publish Date: Wed, 24 Jul 2019 (14:40 IST)
Updated Date: Wed, 24 Jul 2019 (14:42 IST)
ಯಾವುದೇ ಕಾರಣಕ್ಕೂ ಬಿಜೆಪಿಗೆ ಬೆಂಬಲ ಕೊಡೋದಿಲ್ಲ. ಹೀಗಂತ ಬಿಎಸ್ಪಿಯಿಂದ ಉಚ್ಛಾಟನೆಗೊಂಡಿರೋ ಶಾಸಕ ಎನ್.ಮಹೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಬಳಸೋ ಫೋನ್ ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಸಂವಹನ ಕೊರತೆಯಿಂದಾಗಿ ಪಕ್ಷದಿಂದ ಮಾಯಾವತಿ ನನ್ನನ್ನ ಉಚ್ಛಾಟನೆ ಮಾಡಿದ್ದು, ಮುಂದಿನ ದಿನಗಳಲ್ಲಿ ಸರಿಹೋಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸಭೆ ಕಲಾಪದಲ್ಲಿ ಮೈತ್ರಿ ಸರಕಾರ ವಿಶ್ವಾಸ ಮತ ಯಾಚನೆ ಮಾಡಿದೆ. ಆಗ ತಟಸ್ಥರಾಗಿ ಉಳಿಯುವಂತೆ ನನಗೆ ಪಕ್ಷದಿಂದ ಈ ಹಿಂದೆ ನಿರ್ದೇಶನ ಬಂದಿತ್ತು. ಹೀಗಾಗಿ ಕಲಾಪದಲ್ಲಿ ಭಾಗಿಯಾಗಿರಲಿಲ್ಲ ಎಂದರು.