Publish Date: Wed, 10 May 2023 (10:41 IST)
Updated Date: Wed, 10 May 2023 (10:44 IST)
ತುಮಕೂರು : ಇಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ನಾಡಿನಾದ್ಯಂತ ಎಲ್ಲರೂ ತಮ್ಮ ಹಕ್ಕು ಚಲಾಯಿಸುವ ದಿನವಾಗಿದೆ.
ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ನಮ್ಮದೇ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವಂತಹ ವ್ಯವಸ್ಥೆ. ನಮ್ಮ ಸಂವಿಧಾನ ಕೊಟ್ಟಿರುವ ಹಕ್ಕನ್ನು ಪ್ರತಿಯೊಬ್ಬರು ಕೂಡ ಚಲಾವಣೆ ಮಾಡಬೇಕು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.
ಮತದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಮಿಷಗಳಾಗಿ ಒಳಗಾಗದೇ ನಮ್ಮ ಅಮೂಲ್ಯವಾದ ಮತ ನೀಡಿ. ತಮ್ಮ ಒಂದು ಮತಕ್ಕೆ ಬೆಲೆ ಕಟ್ಟಲಾಗದು. ಹೀಗಾಗಿ ಯಾವುದೇ ರೀತಿಯ ಆಸೆ, ಆಮಿಷಗಳಿಗೆ ಒಳಗಾಗದೇ ಮತಚಲಾಯಿಸಬೇಕು. ಈ ಮೂಲಕ ಅದರ ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಬೇಕು ಎಂದರು.