Select Your Language

Notifications

webdunia
webdunia
webdunia
webdunia

ಮೀಸಲಾತಿ ಆಧಾರ ಜೇಷ್ಠತೆ ವಿಸ್ತರಣೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಮೀಸಲಾತಿ ಆಧಾರ ಜೇಷ್ಠತೆ ವಿಸ್ತರಣೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ , ಶುಕ್ರವಾರ, 10 ಮೇ 2019 (18:13 IST)
ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ಜೇಷ್ಠತೆ ವಿಸ್ತರಿಸುವ ರಾಜ್ಯ ಸರ್ಕಾರದ ನೂತನ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಬಿ.ಕೆ. ಪವಿತ್ರ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ಕುರಿತ ತೀರ್ಪನ್ನು ಶುಕ್ರವಾರ ಬೆಳಿಗ್ಗೆ ಪ್ರಕಟಿಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಶಾಸನಸಭೆಯ ನೂತನ ಕಾಯ್ದೆಗೆ  ರಾಷ್ಟ್ರಪತಿ ಅಂಕಿತ ದೊರೆತಿದ್ದು, ಕಾನೂನುಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟರು.

ಕೆನೆ ಪದರದ ತತ್ವ ಈ ಕಾಯ್ದೆಯ ಜಾರಿಯಲ್ಲಿ ಅನ್ವಯವಾಗದು. ತತ್ಪರಿಣಾಮದ ಜೇಷ್ಠತೆ ವಿಸ್ತರಿಸುವ ಕಾಯ್ದೆ ಆಗಿರುವುದರಿಂದ ಕೇವಲ ಉನ್ನತ ಮಟ್ಟದ ಅಧಿಕಾರಿಗಳು ಇದರ ಲಾಭ ಪಡೆಯುವುದರಿಂದ ಕಾಯ್ದೆಯನ್ನು ಮಾನ್ಯ ಮಾಡಲಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಉಚ್ಛ ನ್ಯಾಯಾಲಯ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಓಕಾ