Select Your Language

Notifications

webdunia
webdunia
webdunia
webdunia

ಶಿವಮೊಗ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಸ್ಫೋಟ; 15ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ಶಂಕೆ

webdunia
ಶಿವಮೊಗ್ಗ , ಶುಕ್ರವಾರ, 22 ಜನವರಿ 2021 (10:13 IST)
ಶಿವಮೊಗ್ಗ : ಶಿವಮೊಗ್ಗ ಸಮೀಪದ ಹುಣಸೋಡು ಗ್ರಾಮದ ಬಳಿ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡ ಘಟನೆ ನಡೆದಿದ್ದು, 15ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ನಿನ್ನೆ ರಾತ್ರಿ ಸುಮಾರು 10.30ರ ವೇಳೆಗೆ ಈ ಘಟನೆ ನಡೆದಿದ್ದು, ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡು ಸುತ್ತಮುತ್ತಲಿನ ಜನರನ್ನು ಬೆಚ್ಚಿಬೀಳಿಸಿದೆ. ಈ ಘಟನೆಯಲ್ಲಿ ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದ 15 ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಕಾರ್ಮಿಕರ ದೇಹಗಳು ಛಿದ್ರವಾಗಿವೆ ಎನ್ನಲಾಗಿದೆ.ಈ ಘಟನೆಯಿಂದ ಅಕ್ರಮ ಕ್ರಷರ್ ಗಳ ಮಾಫಿಯಾ ಬೆಳಕಿಗೆ ಬಂದಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆನ್ ಲೈನ್ ಕ್ಲಾಸ್ ಗೆ ಹಾಜರಾಗದ ಮಗನನ್ನು ಸುಟ್ಟು ಬೂದಿ ಮಾಡಿದ ತಂದೆ!