Daily Horoscope

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

Sampriya
ಮಂಗಳವಾರ, 29 ಜುಲೈ 2025 (18:53 IST)
ಬೆಂಗಳೂರು: ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಬಳಿ ಪತ್ತೆಯಾದ ಸ್ಫೋಟಕ ವಸ್ತುಗಳು ಪ್ರಕರಣಕ್ಕೆ ಸಂಬಂಧ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 

ಪೊಲೀಸರ ಹೇಳಿಕೆಯ ಪ್ರಕಾರ, ಪ್ರಕರಣದಲ್ಲಿ ಒಟ್ಟು 22 ಜೀವಂತ (R.E.X-90) ಜಿಲೆಟಿನ್ ಕಡ್ಡಿಗಳು ಮತ್ತು 30 ಜೀವಂತ ಡಿಟೊನೇಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜುಲೈ 23 ರಂದು ಬೆಳಿಗ್ಗೆ 9.30ರ ಸುಮಾರಿಗೆ ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು.  ಬಿಎಂಟಿಸಿ ಸಹಾಯಕ ಸಂಚಾರ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಂಬ್ ತಪಾಸಣೆ ದಳ ಮತ್ತು ಬಾಂಬ್ ನಿಷ್ಕ್ರೀಯ ದಳದೊಂದಿಗೆ ಬಂದು ತಪಾಸಣೆ ನಡೆಸಿದ ಕಲಾಸಿಪಾಳ್ಯ ಠಾಣೆಯ ಪೊಲೀಸರು, ಚೀಲದಲ್ಲಿದ್ದ ಆರು ಜಿಲೆಟಿನ್ ಕಡ್ಡಿಗಳು ಮತ್ತು 12 ಎಲೆಕ್ಟ್ರಿಕ್ ಡಿಟೋನೇಟರ್‌ಗಳನ್ನು ವಶ ಪಡಿಸಿದ್ದಾರೆ. 

ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಶಂಕಿತರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದ್ದು, ತನಿಖೆ ಮುಂದುವರೆದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments